Ultimate magazine theme for WordPress.

News belgaum:ಫೆ.24 ರಂದು ವಿಭಾಗ ಮಟ್ಟದ ಕಾರ್ಯಾಗಾರ -:ಪಿ.ಎ. ಮೇಘಣ್ಣವರDivision Level Workshop on Feb 24: – PA Meghanna’s

Division Level Workshop on Feb 24: - PA Meghanna's

0 127

ಬೆಳಗಾವಿ:  (news belgaum)ಪೂರ್ವಸಿದ್ಧತಾ ಸಭೆ  ಸಫಾಯಿ ಕರ್ಮಚಾರಿ ಹಾಗೂ ಮ್ಯಾನುಯಲ್ ಸ್ಕ್ಯಾವೆಂಜರ್ಸ್‍ಗಳ ಕುರಿತು ಬೆಳಗಾವಿ ವಿಭಾಗ ಮಟ್ಟದ ಕಾರ್ಯಾಗಾರವನ್ನು ಫೆ.24 ರಂದು ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಪ್ರಾದೇಶಿಕ ಆಯುಕ್ತರಾದ ಪಿ.ಎ. ಮೇಘಣ್ಣವರ ಅವರು ತಿಳಿಸಿದರು.
ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಫೆ.16) ಏರ್ಪಡಿಸಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
News Belgaum-News belgaum:ಫೆ.24 ರಂದು ವಿಭಾಗ ಮಟ್ಟದ ಕಾರ್ಯಾಗಾರ -:ಪಿ.ಎ. ಮೇಘಣ್ಣವರಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿ, ಮ್ಯಾನುಯಲ್ ಸ್ಕ್ಯಾವೆಂಜರ್ಸ್‍ಗಳು ಎದುರಿಸುತ್ತಿರುವ ಸಮಸ್ಯೆಗಳು, ಅವರ ಜೀವನದ ಸ್ಥಿತಿಗತಿಗಳ ಕುರಿತು ತಿಳಿದುಕೊಳ್ಳುವುದು, ಪರಿಹಾರ, ಅವರಲ್ಲಿ ಶೈಕ್ಷಣಿಕ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಾಗಾರವನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಫೆ.24 ರಂದು ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ತಾತ್ಕಾಲಿಕವಾಗಿ ದಿನಾಂಕವನ್ನು ನಿಗದಿಪಡಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು. ಆದರೆ ಅಧಿಕಾರಿಗಳು ಈ ಬಗ್ಗೆ ಆಲೋಚಿಸದೇ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿಕೊಳ್ಳಬೇಕೆಂದು ತಿಳಿಸಿದರು.
ಬೆಳಗಾವಿ ವಿಭಾಗದ ಎಲ್ಲ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಹಾಗೂ ಮಹಾನಗರ ಪಾಲಿಕೆಗಳ ಪೌರ ಕಾರ್ಮಿಕರು ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಜೊತೆಗೆ ಕೆಎಸ್‍ಆರ್‍ಟಿಸಿ, ರೈಲ್ವೆ ನಿಲ್ದಾಣ ಮತ್ತು ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಿಳಿಸಬೇಕೆಂದು ಸೂಚನೆ ನೀಡಿದರು.
ಕಾರ್ಯಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳನ್ನು ಹಾಗೂ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಆಹ್ವಾನಿಸಬೇಕೆಂದು ಸೂಚಿಸಿದರು.
ಕಾರ್ಯಾಗಾರದಲ್ಲಿ ಪೌರ ಕಾರ್ಮಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಉಪನ್ಯಾಸ ನೀಡಲು ಇಬ್ಬರು ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಬೇಕೆಂದು ಹೇಳಿದರು.
ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಯಾವುದೇ ಪದವಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ಹಾಗೂ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿರುವ ಪೌರ ಕಾರ್ಮಿಕರ ಮಕ್ಕಳನ್ನು ಗುರುತಿಸಿ, ಕಾರ್ಯಾಗಾರದಲ್ಲಿ ಸನ್ಮಾನಿಸಲಾಗುವುದು. ಜೊತೆಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ಪೌರ ಕಾರ್ಮಿಕರನ್ನು ಸಹ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಅರಿವು ಮೂಡಿಸಿ:
ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿ, ಮ್ಯಾನುಯಲ್ ಸ್ಕ್ಯಾವೆಂಜರ್ಸ್‍ಗಳಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಿಳಿ ಹೇಳಿ ಅವುಗಳ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಬೇಕು. ಆರೋಗ್ಯದ ಹಿತದೃಷ್ಟಿಯಿಂದ ಕೆಲಸದಲ್ಲಿ ಅವರು ಸುರಕ್ಷತಾ ಪರಿಕರಗಳನ್ನು ಬಳಸುವಂತೆ ಅರಿವು ಮೂಡಿಸಬೇಕೆಂದು ಸೂಚಿಸಿದರು.
ಮಹಾನಗರ ಪಾಲಿಕೆಯ ಆಯುಕ್ತರಾದ ಶಶಿಧರ ಕುರೇರ ಅವರು ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಾಗಾರ ನಡೆಯುವ ಕೆಲವು ದಿನಗಳ ಮುಂಚಿತವಾಗಿಯೇ ಆಯಾ ಭಾಗದ ಪೌರ ಕಾರ್ಮಿಕರ ಮನೆಗಳಿಗೆ ತೆರಳಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವಂತೆ ತಿಳಿಸಬೇಕು. ಜೊತೆಗೆ ಅವರ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸಲು ಪ್ರಯತ್ನಿಸಬೇಕು. ತಮ್ಮ ಮಟ್ಟದಲ್ಲಿ ಪರಿಹಾರ ಸಾಧ್ಯವಾಗದಿದ್ದರೆ ಸಮಸ್ಯೆಗಳನ್ನು ಪಟ್ಟಿ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಬೇಕೆಂದು ತಿಳಿಸಿದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಎನ್. ಮುನಿರಾಜು ಅವರು ನಿರ್ವಹಿಸಿದರು. ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಎಸ್.ಬಿ. ಮುಳ್ಳಳ್ಳಿ, ನಗರಾಭಿವೃದ್ಧಿ ಕೋಶದ ಅಧಿಕಾರಿ ಪ್ರವೀಣ ಬಾಗೇವಾಡಿ ಸೇರಿದಂತೆ ವಿಭಾಗದ ಎಲ್ಲ ಜಿಲ್ಲೆಗಳ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತನ ಅಧಿಕಾರಿಗಳು ಸೇರಿದಂತೆ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು. Division Level Workshop on Feb 24: – PA Meghanna’s

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

Leave A Reply

Your email address will not be published.