Ultimate magazine theme for WordPress.

news belgaum:ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಲು ಸಲಹೆ

s s l c, PUC Exam: Recommended for confidence in students

0 56

ಬೆಳಗಾವಿ: (news belgaum)ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿರುವ ಈ ಸಂದರ್ಭದಲ್ಲಿ ಶಿಕ್ಷಕರು/ಉಪನ್ಯಾಸಕರು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಆಪ್ತಸಮಾಲೋಚನೆ ನಡೆಸುವ ಮೂಲಕ ಅವರನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್. ಅವರು ಸೂಚನೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪರೀಕ್ಷಗೆ ಸಜ್ಜಾಗುತ್ತಿರುವ ವಿದ್ಯಾರ್ಥಿಗಳ ಬಗ್ಗೆ ನಿರಂತರ ಕಾಳಜಿ ವಹಿಸಬೇಕು ಎಂದು ತಿಳಿಸಿದ್ದಾರೆ.
2018ರ ಮಾರ್ಚ ಮತ್ತು ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆಗಳು ನಡೆಯಲಿದ್ದು, ನಿರ್ಭಯದಿಂದ ಪರೀಕ್ಷೆ ಬರೆಯುವ ಅಗತ್ಯವಿರುತ್ತದೆ. ಕಡಿಮೆ ಅಂಕಗಳು ಬರಬಹುದು ಅಥವಾ ಅನುತ್ತೀರ್ಣರಾಗಬಹುದು ಎಂಬ ಭಯವನ್ನು ವಿದ್ಯಾರ್ಥಿಗಳು ಹೊಂದಿರುತ್ತಾರೆ. ಇದರಿಂದ ಖಿನ್ನತೆ ಕಂಡುಬರುತ್ತದೆ. ಆದ್ದರಿಂದ ಪಾಲಕರು ಹಾಗೂ ಶಿಕ್ಷಕರು ಈ ಬಗ್ಗೆ ಗಮನಹರಿಸಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದು ರಾಮಚಂದ್ರನ್ ತಿಳಿಸಿದ್ದಾರೆ.
ಪರೀಕ್ಷೆಗಳು ಮತ್ತೆ ಮತ್ತೆ ಬರುತ್ತವೆ. ಆದರೆ ಬದುಕು ದೊಡ್ಡದು. ಕಡಿಮೆ ಅಂಕ ಬಂದರೆ ಅಥವಾ ಅನುತ್ತೀರ್ಣಗೊಂಡರೆ ಎದೆಗುಂದದೆ ಮರಳಿ ಪ್ರಯತ್ನಿಸಲು ಅವಕಾಶಗಳಿರುತ್ತವೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು ಎಂದು ಸಲಹೆ ನೀಡಿರುವ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಅವರು, ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದ್ದಾರೆ.s s l c, PUC Exam: Recommended for confidence in students

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Leave A Reply

Your email address will not be published.