Ultimate magazine theme for WordPress.

ಎಸ್‍ಸಿ,ಎಸ್ಟಿ ವಿದ್ಯಾರ್ಥಿ ವೇತನಕ್ಕೆ ಆಧಾರ ಜೋಡಣೆ ಕಡ್ಡಾಯ – ಸಿಇಒ ರಾಮಚಂದ್ರನ್ ಆರ್.Scholarship must be compulsory – Student Ramachandran R.

Scholarship must be compulsory - Student Ramachandran R.

0 83

ಬೆಳಗಾವಿ:(news belgaum ) ಎಸ್‍ಸಿ, ಎಸ್ಟಿ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಮಾಡುವವರೆಗೆ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಬಾರದು ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್ ಆರ್. ಅವರು ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ (ಫೆ.15) ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ವೇತನಕ್ಕೆ ಆಧಾರ ಜೋಡಣೆ ಮಾಡುವುದರಿಂದ ನೇರವಾಗಿ ಮತ್ತು ಖಚಿತವಾಗಿ ಅವರ ಖಾತೆಗೆ ಜಮಾ ಆಗುತ್ತದೆ. ಯಾರ ಹೆಸರಿನಲ್ಲಿ ಖಾತೆಯಿದೆ ಎನ್ನುವುದು ಖಚಿತವಾಗುತ್ತದೆ. ಆದ್ದರಿಂದ ಜಿಲ್ಲೆಯ ಎಲ್ಲ ಎಸ್‍ಸಿ, ಎಸ್ಟಿ ವಿದ್ಯಾರ್ಥಿಗಳ ಖಾತೆಗೆ ಕಡ್ಡಾಯವಾಗಿ ಆಧಾರ ಜೋಡಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
2017ರ ಡಿಸೆಂಬರ್ 31 ರೊಳಗೆ ಜಿಲ್ಲೆಯಲ್ಲಿ ಎಷ್ಟು ಎಸ್‍ಸಿ, ಎಸ್ಟಿ ವಿದ್ಯಾರ್ಥಿಗಳು ಇದ್ದಾರೆ ಮತ್ತು ಎಷ್ಟು ವಿದ್ಯಾರ್ಥಿಗಳು ಅವರ ಖಾತೆಗೆ ಆಧಾರ ಜೋಡಣೆ ಮಾಡಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಹೇಳಿದರು.
ಪ್ರಧಾನಮಂತ್ರಿ ಜನ್‍ಧನ್ ಯೋಜನೆಯಡಿಯಲ್ಲಿ 2015-16 ಮತ್ತು 2016-18ರ ಜನವರಿ ತಿಂಗಳವರೆಗೆ ಎಷ್ಟು ಗ್ರಾಹಕರಿಗೆ ಖಾತೆಗಳನ್ನು ನೀಡಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಿಬೇಕೆಂದು ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದರು.
ಎಲ್ಲ ಇಲಾಖೆಯ ಅಧಿಕಾರಿಗಳು ಸಭೆಗೆ ಬರುವ ಮುನ್ನ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕು. ಸಭೆಗೆ ನಿರಂತರವಾಗಿ ಗೈರು ಹಾಜರಾದರೆ ಅಂತವರ ವಿರುದ್ಧು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಫೆಬ್ರವರಿ 28 ರೊಳಗೆ ಎಲ್ಲ ಇಲಾಖೆಯ ಕೆಲಸಗಳು ಶೇ. 100 ರಷ್ಟು ಸಂಪೂರ್ಣಗೊಳ್ಳಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಂಸದರಾದ ಸುರೇಶ ಅಂಗಡಿ ಅವರು ಮಾತನಾಡಿ, ಮುದ್ರಾ ಮತ್ತು ಫಸಲ್ ಭೀಮಾ ಯೋಜನೆಯನ್ನು ರೈತರಿಗೆ ಅಧಿಕಾರಿಗಳು ಸರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಹೇಳಿದರು.
ಲೀಡ್ ಬ್ಯಾಂಕಿನ ಜಿಲ್ಲಾ ಮುಖ್ಯ ವ್ಯವಸ್ಥಾಪಕರಾದ ಬಿ. ನಾಗರಾಜು, ನಬಾರ್ಡ್ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕರಾದ ಆದಿತ್ಯ ಮಾವಿನಕುರವೆ, ಆರ್.ಬಿ.ಐ. ಬ್ಯಾಂಕಿನ ಸಹಾಯಕ ವ್ಯವಸ್ಥಾಪಕರಾದ ಗೋಪಾಲ ತೆರದಾಳ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿಗಳಾದ ಶಂಕರಾನಂದ ಬನಶಂಕರಿ ವೇದಿಕೆ ಮೇಲೆ ಉಪಸ್ಥಿತರಿದ್ದರು

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Scholarship must be compulsory – Student Ramachandran R.

 

 

Leave A Reply

Your email address will not be published.