Ultimate magazine theme for WordPress.

ಮಾನವ ಹಕ್ಕುಗಳ ಆಯೋಗಕ್ಕೆ ದೂರು ಇಸಾಬೆಲ್ಲಾ ಝೇವಿಯರ್

Complaint to Human Rights Commission Isabella Zavier

0 44

ಧಾರವಾಡ: (newsbelgaum)ಶಾಂತಿ, ಸೌಹಾರ್ಧತೆಗೆ ಹೆಸರಾಗಿದ್ದ ಧಾರವಾಡ ಜಿಲ್ಲೆಯಲ್ಲಿ ಇದೀಗ ಮಚ್ಚು, ಲಾಂಗುಗಳು ಝಳಪಿಸುತ್ತಿವೆ. ಜನ ಸಾಮಾನ್ಯರ ಸಾವು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಹೀಗಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ಇಸಾಬೆಲ್ಲಾ ಝೇವಿಯರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿನಗರಗಳಲ್ಲಿ ಹೆಚ್ಚಿರುವ ಕೊಲೆ, ರಕ್ತಪಾತ ಕುರಿತು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು ಏಕೆ ಮಾತನಾಡುತ್ತಿಲ್ಲ? ಪೊಲೀಸ್ ಇಲಾಖೆ ಏನು ಮಾಡುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ. ಜನ ಸಾಮಾನ್ಯರ ಸಾವಿಗೆ ಬೆಲೆಯೇ ಇಲ್ಲದಂತಾಗಿದೆ. ಪರಮಾನಂದ ಕೆಂಬಾವಿ, ಕುಮಾರ್ ಪಿಳ್ಳೆ, ಮಹೇಶ ಬ್ಯಾಹಟ್ಟಿ ಕೊಲೆ ಬಗ್ಗೆ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಏಕೆ ಚಕಾರವೆತ್ತುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ರಾಜ್ಯದ ಮಾನವ ಹಕ್ಕುಗಳ ಆಯೋಗದ ಮೇಲೆ ನನಗೆ ವಿಶ್ವಾಸವಿಲ್ಲ. ಹೀಗಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಈ ಸಂಬಂಧ ದೂರು ನೀಡಿದ್ದೇನೆ. ರಾಜ್ಯ ಸರ್ಕಾರ ಹಾಗೂ ಅವಳಿ ನಗರದ ಪೊಲೀಸ್ ಇಲಾಖೆ ಮೇಲೆ ನಾನು ನಂಬಿಕೆ ಕಳೆದು ಕೊಂಡಿದ್ದೇನೆ. ಇವರ ಸಾವಿನ ಬಗ್ಗೆ ಸಾಹಿತಿಗಳು, ಚಿಂತಕರು, ಹೋರಾಟಗಾರರು, ರಾಜಕೀಯ ಪಕ್ಷಗಳ ನಾಯಕರು ಮೌನ ವಹಿಸಿರುವುದು ದುಃಖ ದಾಯಕ ಸಂಗತಿ. ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಇದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದರು.

ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಪರಿಸ್ಥಿತಿ ರಾಜ್ಯದಲ್ಲಿ  ನಿರ್ಮಾಣವಾಗಿದೆ. ಈ ಬಗ್ಗೆ ಜನರು ಜಾಗೃತರಾಗುವ ಮೂಲಕ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿಜಯಪುರದ ದಾನಮ್ಮ ಅತ್ಯಾಚಾರ ಪ್ರಕರಣದಲ್ಲಿ ಅವಳ ಚಾರಿತ್ರ್ಯವನ್ನೇ ಅವಮಾನಿಸಿದ ಬೆಳಗಾವಿಯ ಉತ್ತರ ವಲಯದ ಐಜಿಪಿ ರಾಮಚಂದ್ರರಾವ್ ಅವರು ನಡೆದುಕೊಂಡ ರೀತಿಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಅವರು, ರಾಮಚಂದ್ರರಾವ್ ಅವರು ಹಿರಿಯ ಪೊಲೀಸ್ ಅಧಿಕಾರಿಯಾಗಿರುವುದೇ ನಾಲಾಯಕ್ ಎಂದರು.Complaint to Human Rights Commission Isabella Zavier

Leave A Reply

Your email address will not be published.