Ultimate magazine theme for WordPress.

ಅವಳಿ ನಗರದಲ್ಲಿರುವ ವಿವಿಧ ಕೊಳಗೇರಿಗಳನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ .ಪಾದಯಾತ್ರೆ ನಡೆಸಿದರು.

Force the various slums in the city to develop

0 67

ಧಾರವಾಡ: (news belgaum)ಅವಳಿ ನಗರದಲ್ಲಿರುವ ವಿವಿಧ ಕೊಳಗೇರಿಗಳನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿರಂತರವಾಗಿ ಹತ್ತಾರು ಮನವಿ ಸಲ್ಲಿಸಿದರೂ ಧಾರವಾಡ ಜಿಲ್ಲಾಡಳಿತ ಸ್ಪಂದಿಸಿಲ್ಲ ಎಂದು ಆರೋಪಿಸಿ ನೂರಾರು ದಲಿತ ಕಾರ್ಯಕರ್ತರು ಹುಬ್ಬಳ್ಳಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿವರೆಗೂ ಪಾದಯಾತ್ರೆ ನಡೆಸಿದರು.

ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಕನ್ಯಾನಗರದಿಂದ ಆರಂಭಗೊಂಡ ಕಾಲ್ನಡಿಗೆ ಜಾಥಾ ಸಂಜೆ 6 ಗಂಟೆಯ ಸುಮಾರಿಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ತಲುಪಿತು, ರಾಜ್ಯ ಸರ್ಕಾರ ಕೂಡಲೇ ಕೊಳಗೇರಿಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಹಾಗೂ ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ನೀಡಲೇ ಬೇಕು ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದ ಡಿಎಸ್‍ಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ನಡೆಸಲಾಗುವುದು ಎಂದು ಅರೆಬೆತ್ತಲಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಮನವಿ ಸ್ವೀಕರಿಸಿ, ವಸ್ತು ಸ್ಥಿತಿಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆ ಹಿಂದಕ್ಕೆ ಪಡೆದರು.

ಡಿಎಸ್‍ಎಸ್ ರಾಜ್ಯ ಸಂಘಟನಾ ಸಂಚಾಲಕ ಮರೀಶ ನಾಗಮ್ಮನವರ, ಜಿಲ್ಲಾಧ್ಯಕ್ಷ ಸುರೇಶ ಖಾನಾಪುರ, ಮುಖಂಡರಾದ ಪ್ರಕಾಶ ತಿರ್ಲಾಪುರ, ರಾಜು ನೀರಲಕೇರಿ, ಸಿದ್ಧಾರ್ಥ ಮಲ್ಲಮ್ಮನವರ, ಕೆಂಚಪ್ಪ ಮಲ್ಲಮ್ಮನವರ, ಮಹಾದೇವ ಮಾದರ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.Force the various slums in the city to develop 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

Leave A Reply

Your email address will not be published.