“ಸರದಾರ ರಾಜಾ ಲಖಮಗೌಡ”ರ 157ನೇ ಜಯಂತಿಯನ್ನು ಆಚರಿಸಲಾಯಿತು.

0

ಬೆಳಗಾವಿ ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ದಿನಾಂಕ 29-7-2020 ರಂದು ಸರ್ ಸಿ.ವಿ. ರಾಮನ್ ಸಭಾಂಗಣದಲ್ಲಿ “ಸರದಾರ ರಾಜಾ ಲಖಮಗೌಡ”ರ 157ನೇ ಜಯಂತಿಯನ್ನು ಆಚರಿಸಲಾಯಿತು.

ಪ್ರಾಚಾರ್ಯರಾದ ಡಾ.ವ್ಹಿ.ಡಿ. ಯಳಮಲಿ ಅವರು “ಸರದಾರ ರಾಜಾ ಲಖಮಗೌಡ”ರ ಭಾವಚಿತ್ರಕ್ಕೆ ಪೂಜಾ ಕೈಂಕರ್ಯವನ್ನು ನೆರವೇರಿಸಿದರು.ಕಾರ್ಯಕ್ರಮದಲ್ಲಿ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ.ಎಸ್.ಜಿ. ನಂಜಪ್ಪನವರ ಉಪಸ್ಥಿತರಿದ್ದರು. ಪದವಿ ವಿಭಾಗದ ಎಲ್ಲ ವಿಭಾಗಗಳ ಮುಖ್ಯಸ್ಥರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿವರ್ಗದವರು ಪಾಲ್ಗೊಂಡಿದ್ದರು.

ಭಾವಚಿತ್ರದಲ್ಲಿ : ಪ್ರಾಚಾರ್ಯರಾದ ಡಾ.ವ್ಹಿ.ಡಿ. ಯಳಮಲಿ, ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ.ಎಸ್.ಜಿ. ನಂಜಪ್ಪನವರ ಹಾಗೂ ಎಲ್ಲ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದಾರೆ.///