ಹೆಚ್ಚುತ್ತಿರುವ ಕೊರೋನಾ ಭೀತಿ ನಡುವೆ ಶಾಲೆಗಳನ್ನು ಪ್ರಾರಂಭಿಸಲಾಗುತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ

0
advertise with us

ಮಂಡ್ಯ, ಆ.13 : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಭೀತಿ ನಡುವೆ ಶಾಲೆಗಳನ್ನು ಪ್ರಾರಂಭಿಸಲಾಗುತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೇ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದು ಸಚಿವ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

web design service in Belgaum

ಇಂದು ಗುರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ನಮ್ಮ ಮುಂದೆ ದೊಡ್ಡ ಸವಾಲು ಇದೆ. ಮುಂದಿನ ಶೈಕ್ಷಣಿಕ ದಿನಗಳು ಹೇಗೆ ಎಂದು ಯೋಚನೆ ಮಾಡುವಂತಾಗಿದೆ. ನನಗೆ ಬಹಳ ಮುಖ್ಯವಾದ ಆದ್ಯತೆ ಅಂದ್ರೆ, ನಮ್ಮ ಮಕ್ಕಳ ಆರೋಗ್ಯ. ಅದನ್ನ ಬಹಳ ಸುರಕ್ಷತಾ ದೃಷ್ಠಿಯಿಂದ ನೋಡಬೇಕು. ಜೊತೆಗೆ ನಮ್ಮ ಮಕ್ಕಳ ಕಲಿಕೆ ಹೇಗೆ? ಯಾವ ರೀತಿ ಕಲಿಕೆಯನ್ನು ಮುಂದುವರಿಸಬಹುದು ಎಂಬುದಕ್ಕೆ ಈಗಾಗಲೇ ನಮ್ಮ ರಾಜ್ಯದಲ್ಲಿ ವಿದ್ಯಾಗಮನ ಎಂಬ ಯೋಜನೆಯನ್ನು ತರಲಾಗಿದೆ. ಈ ವಿದ್ಯಾಗಮನ ಯೋಜನೆ ಇಡೀ ರಾಷ್ಟ್ರವೇ ನೋಡುವಂತ ಅತ್ಯುತ್ತಮ ಯೋಜನೆ ಎಂದು ಹೇಳಿದರು.

ಈಗಾಗಲೇ ಎಲ್ಲರ ಮನೆಗೆ ಪಠ್ಯ ಪುಸ್ತಕ ತಲುಪಿಸಿದ್ದೇವೆ. ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮ ಮಾಡ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಎರಡು ಚಾನಲ್ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದೆ, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಸಮಾಜಕ್ಕೆ ಭರವಸೆ ಕೊಡುವ ಕಾರ್ಯವನ್ನ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದರು.