ಅಕ್ಟೋಬರ್‌ 28 ರಂದು ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಕ್ಕೆ ಚುನಾವಣೆ

0

ಹೊಸದಿಲ್ಲಿ, ಸೆ. 29- ರಾಜ್ಯ ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ಅಕ್ಟೋಬರ್‌ 28 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್‌ 1 ರಿಂದ ನಾಮಪತ್ರ ಸಲ್ಲಿಸುವ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು,
ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಯ ಅಧಿಸೂಚನೆ‌ ಅಕ್ಟೋಬರ್ 1 ರಂದು ಜಾರಿಯಾಗಲಿದೆ.

ಆಗ್ನೇಯ ಪದವೀಧರರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಕಳೆದ ಜೂನ್‌ 30 ಕ್ಕೆ ಚೌಡರೆಡ್ಡಿ ತೂಪಲ್ಲಿ, ಎಸ್‌.ವಿ.ಸಂಕನೂರ, ಶರಣಪ್ಪ ಮಟ್ಟೂರು ಮತ್ತು ಪುಟ್ಟಣ್ಣ ಅವರ ಅವಧಿ ಕೊನೆ ಗೊಂಡಿತ್ತು.

ಅ.8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಅ.9, ನಾಮಪತ್ರ ಹಿಂದಕ್ಕೆ ಪಡೆಯಲು ಅ.12 ಕೊನೆಯ ದಿನ ವಾಗಿದೆ.