ನಬಣ್ಣ ಚಲೋ’ ಪ್ರತಿಭಟನೆ ನಿಯಂತ್ರಣಕ್ಕಾಗಿ ಅಲ್ಲಿನ ಪೊಲೀಸರು ಲಾಠಿಚಾರ್ಜ್

0

ಕೋಲ್ಕತ್ತಾ:  ಬಿಜೆಪಿ ಕಾರ್ಯಕರ್ತನ ಕೊಲೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಡೆಸುತ್ತಿರುವ ‘ನಬಣ್ಣ ಚಲೋ’ ಪ್ರತಿಭಟನೆ ನಿಯಂತ್ರಣಕ್ಕಾಗಿ ಅಲ್ಲಿನ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ. ಅಲ್ಲದೇ ಅಶ್ರುವಾಯು ಸಿಡಿಸಿದ್ದಾರೆ.  ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದಾಗ  ನಮ್ಮ ಆಂದೋಲವನ್ನ ಹತ್ತಿಕ್ಕವ ಯತ್ನ ನಡೆದಿದೆ ಅಂತಾ ಬಿಜೆಪಿ ನಾಯಕಿ ಕೈಲಾಸ್ ವಿಜಯ್​ವರ್ಗಿಯಾ ಪ್ರತಿಭಟನಾ ಸ್ಥಳದಲ್ಲಿ ಆರೋಪಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕೂಡ ಭಾಗಿಯಾಗಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯಾದ್ಯಂತ ಈ ಪ್ರತಿಭಟನೆ ನಡೆಯುತ್ತಿದೆ.