ಬೈಕ್ ಮತ್ತು ಬಿಡಿಭಾಗಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ.

0

ಹುಕ್ಕೇರಿ:ಸಿಪಿಐ ಗುರುರಾಜ ಕಲ್ಯಾಣಶೆಟ್ಟಿ ತಂಡದಿಂದ ಭಾರಿ ಭರ್ಜರಿ ಬೇಟೆ ಬೈಕ ಕಳ್ಳರ ಬಂಧನ. ಬೆಳಗಾವಿ ಜಿಲ್ಲೆಯ ವಿವಿಧೆಡೆ ಬೈಕ್ ಮತ್ತು ಬಿಡಿಭಾಗಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 6.24 ಲಕ್ಷ ರೂ. ಮೌಲ್ಯದ 13 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪರಾರಿಯಾಗಿರುವ ಮುಖ್ಯ ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ.ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ನಂಬರ್ ಪ್ಲೇಟ್ ಇಲ್ಲದೇ ಸಂಚರಿಸುತ್ತಿದ್ದ ಬೈಕ್ ಒಂದನ್ನು ತಡೆದ ಹುಕ್ಕೇರಿ ಸಿಪಿಐ ಗುರುರಾಜ ಕಲ್ಯಾಣಶೆಟ್ಟಿ ಈ ಕುರಿತು ವಿಚಾರಣೆ ನಡೆಸಲು ಪಿಎಸ್‍ಐ ಶಿವಾನಂದ ಗುಡಗನಟ್ಟಿ ಮತ್ತು ತಂಡಕ್ಕೆ ಸೂಚನೆ ನೀಡಿದರು. ಪೊಲೀಸ್ ತಂಡ ಜಮಖಂಡಿ ತಾಲೂಕು ಚಿಮ್ಮಡದ ದಾವುದ್ ಖುದಾಸಾಬ್ ಸರಕಾವಾಸ್ ಮತ್ತು ಸಾವಳಗಿಯ ಮಹೇಶ ಬಸಪ್ಪ ಮಗದುಮ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಬೈಕ್ ಕಳ್ಳತನ ಪ್ರಕರಣಗಳು ಬಯಲಿಗೆ ಬಂದಿವೆ.ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರಿಂದ 6.24 ಲಕ್ಷ ರೂ. ಮೌಲ್ಯದ 13 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮುಖ್ಯ ಆರೋಪಿ ಪರಾರಿಯಾಗಿದ್ದು, ಪೊಲೀಸರು ಜಾಲ ಬೀಸಿದ್ದಾರೆ.
ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.