ಕೋವಿಡ್-19 ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಚಾಲನೆ

0

ಬೆಳಗಾವಿ, : ಕೇಂದ್ರ ಸರ್ಕಾರದ ನಿರ್ದೇಶನದಂತೆ ಧಾರವಾಡದ ಕ್ಷೇತ್ರ ಜನ ಸಂಪರ್ಕ ಕಾರ್ಯಲಯ ವತಿಯಿಂದ ಕೊರೋನಾ ಮಹಾಮಾರಿ ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಕೋವಿಡ-19 ಕುರಿತು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಎಂ.ಜಿ. ಹೀರೆಮಠ ಅವರು ಗುರುವಾರ(ಅ.29) ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಾಗೃತಿ ಕಾರ್ಯಕ್ರಮಕ್ಕೆ ಹಸಿರುನಿಶಾನೆ ತೋರಿಸಿದರು.
ಇದೇ ಸಂದರ್ಭದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರತಿಜ್ಞಾ ವಿಧಿಯನ್ನು ಅವರು ಬೋಧಿಸಿದರು.
ಜಿಲ್ಲೆಯಲ್ಲಿ ಹೆಚ್ಚು ಸೋಂಕು ಕಂಡು ಬಂದ ಆಯ್ದ ಗ್ರಾಮಗಳಲ್ಲಿ ಜಾನಪದ ಕಲಾವಿದರು ಹಾಗೂ ಆರೋಗ್ಯ ಶಿಕ್ಷಣ ಮತ್ತು ಅರಿವು ಮೂಡಿಸುವ ಬಿತ್ತಿ ಫಲಕಗಳನ್ನು ಒಳಗೊಂಡ ಆಟೋ ವ್ಯಾನ್ ಮೂಲಕ ಗ್ರಾಮೀಣ ಮತ್ತು ನಗರ ಪ್ರದೇಶದ ಜನರಲ್ಲಿ ಕೋವಿಡ-19 ಬಗ್ಗೆ ಜಾಗೃತಿ ಮೂಡಿಸುವ ಮತ್ತು ಮಾಸ್ಕ ಧರಿಸುವ ಕುರಿತು, ಸಾಮಾಜಿಕ ಅಂತರ ಕಾಯ್ದಕೊಳ್ಳುವ ಹಾಗೂ ಕೈಗಳನ್ನು ಪದೇ ಪದೇ ಸ್ವಚ್ಛವಾಗಿ ತೊಳೆದುಕೊಳ್ಳುವ ಕುರಿತು ಗ್ರಾಮೀಣ ಭಾಗದ ಜನರಿಗೆ ಕಲಾವಿದರ ಮೂಲಕ ಬಿದಿ ನಾಟಕ ಮತ್ತು ಜಾನಪದ ಗೀತೆಗಳನ್ನು ಹಾಡಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಧಿಕಾರಿ ಡಾ. ಎಸ್.ವಿ.ಮುನ್ಯಾಳ, ಧಾರವಾಡ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯದ ಮುರಳಿಧರ ಕಾರಭಾರಿ, ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಹಾಗೂ ಆರೋಗ್ಯಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಮುಂತಾದವರು ಭಾಗವಹಿಸಿದ್ದರು.////