ಬೆಳಗಾವಿ ಡಿಸಿಸಿ ಬ್ಯಾಂಕ್ ಗೆ 16 ಕ್ಷೇತ್ರದಲ್ಲಿಯೂ ಅವಿರೋಧ ಆಯ್ಕೆಗೆ ಪ್ರಯತ್ನ: ಡಿಸಿಎಂ ಲಕ್ಷ್ಮಣ ಸವದಿ

0

ಬೆಳಗಾವಿ: ಪಕ್ಷದ ಪರಿವಾರದ ಸೂಚನೆಯಂತೆ ರೈತರ ಏಳಿಗೆಗಾಗಿ ನಮ್ಮಲ್ಲಿರುವ ಭಿನ್ನಾಪ್ರಾಯ ಬದಿಗಿಟ್ಟು ಒಗ್ಗಟ್ಟಾಗಿ ಬ್ಯಾಂಕ್ ಇತಿಹಾಸದಲ್ಲಿ ಮೊದಲ ಬಾರಿಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ಗೆ  16 ಕ್ಷೇತ್ರದಲ್ಲಿ ಅವಿರೋಧ ಆಯ್ಕೆ ನಡೆಸಲು ಪ್ರಯತ್ನಿಸಲಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರ ಅಭಿವೃದ್ಧಿ ಉದ್ದೇಶಿಂದ ಬ್ಯಾಂಕ್ ನಲ್ಲಿ ಅವಿರೋಧ ಆಯ್ಕೆಯಾಗಬೇಕು ಎಂಬುವುದು ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಪಕ್ಷ ಪರಿವಾರ ಸೂಚಸಿದ ಹಿನ್ನೆಲೆ ಅವಿರೋಧ ಆಯ್ಕೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಈಗಾಗಲೇ 7 ತಾಲೂಕಿನ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಂದೇ ನಾಮಪತ್ರ ಸಲ್ಲಿಕೆಯಾಗಿವೆ. ಇನ್ನೂ 4 ಕ್ಷೇತ್ರದಲ್ಲಿ ಎರಡು ಮೂರು ನಾಮಪತ್ರ ಸಲ್ಲಿಕೆಯಾಗಿವೆ. ಖಾನಾಪುರ, ರಾಮದುರ್ಗ, ಬೈಲಹೊಂಗಲ ಕ್ಷೇತ್ರದಲ್ಲಿ ಒಂದಕ್ಕಿಂತ ಹೆಚ್ಚು ನಾಮಪತ್ರ ಸಲ್ಲಿಸಿರುವುದರಿಂದ ಆ ಅಭ್ಯರ್ಥಿಯ ಮನವೊಲಿಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ವಿಧಾನಪರಿಷತ್ ಉಪ ಸಭಾಪತಿ ಆನಂದ ಮಾಮನಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವೆ ಶಶಿಕಲಾ‌ ಜೊಲ್ಲೆ, ಶಾಸಕ ಉಮೇಶ ಕತ್ತಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.