ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಶ್ರೀ ಸಂಜಯ ಪಾಟೀಲ ಇವರು ಈ ಭರ್ಜರಿ ಗೆಲುವಿಗೆ ಹರ್ಷ ವ್ಯಕ್ತ

0

ಬೆಳಗಾವಿ.ನ.10: ವಿವಿಧ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು. ಕರ್ನಾಟಕ ಹಾಗೂ ಬಿಹಾರ, ಮದ್ಯಪ್ರದೇಶ ಇನ್ನಿತರ ರಾಜ್ಯಗಳ ಚುನಾವಣೆ ಹಾಗೂ ಉಪಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವು ಭರ್ಜರಿಯಾಗಿ ಜಯಸಾಧಿಸಿದ್ದು

ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಇವರ ನೇತ್ರತ್ವದಲ್ಲಿ ಪಕ್ಷ ಉತ್ತಮವಾಗಿ ಬೆಳವಣಿಗೆ ಹೊಂದುತ್ತಿದ್ದು, ಈ ಗೆಲುವನ್ನು ಸಾಧಿಸಲು ಕಾರಣೀಬೂತರಾದ ಪಕ್ಷದಲ್ಲಿ ದುಡಿಯುತ್ತಿರುವ ಪ್ರತಿಯೊಬ್ಬ ಕಾರ್ಯಕರ್ತರಿಗೂ ಹಾಗೂ ಸಾಮಾನ್ಯ ಜನರಿಗೂ ಈ ಗೆಲುವನ್ನು ಸಮರ್ಪಿಸಲಾಯಿತು.

ಈ ಗೆಲುವಿನಿಂದ ನಮ್ಮ ಸಾಮಾಜಿಕ ಜವಾಬ್ದಾರಿಯು ಹೆಚ್ಚಾಗಿದೆ. ಅಭಿವೃದ್ಧಿ ದೃಷ್ಟಿಯಿಂದ ನಮಗೆ ಇನ್ನೂ ಹೆಚ್ಚಿನದನ್ನು ಸಾಧಿಸಲು ಅನುಕೂಲವಾಗಿದೆ ಎಂದು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಶ್ರೀ ಸಂಜಯ ಪಾಟೀಲ ಇವರು ಈ ಭರ್ಜರಿ ಗೆಲುವಿಗೆ ಹರ್ಷ ವ್ಯಕ್ತಪಡಿಸಿದರು