ಮತದಾರರು ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ  ಒಪ್ಪುತ್ತೇವೆ. ಕೆಪಿಸಿಸಿ  ಅಧ್ಯಕ್ಷ  ಡಿ.ಕೆ. ಶಿವಕುಮಾರ್

0

ಬೆಂಗಳೂರು:  ಎರಡು ವಿಧಾನಸಭೆ  ಉಪ ಚುನಾವಣೆಯಲ್ಲಿ ಮತದಾರರು ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ  ಒಪ್ಪುತ್ತೇವೆ. ಪಕ್ಷದ ಅಧ್ಯಕ್ಷನಾಗಿ ಸೋಲಿನ ಹೊಣೆ ನಾನೇ ಹೊರುತ್ತೇನೆ ಎಂದು ಕೆಪಿಸಿಸಿ  ಅಧ್ಯಕ್ಷ  ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

 

ಉಪ ಚುನಾವಣೆಯಲ್ಲಿ  ಸೋಲಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ.  ಫಲಿತಾಂಶ  ಹೇಗಾಯಿತು, ಯಾಕಾಯಿತು ಎಂಬುದನ್ನು ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇವೆ. ಎಲ್ಲಿ ಏನೇನು ಸರಿ ಮಾಡಿಕೊಳ್ಳಬೇಕೋ ಅದನ್ನು ಮಾಡುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಸೋತಿದ್ದೇವೆ ಎಂದು ನಾನಾಗಲಿ, ಪಕ್ಷವಾಗಲಿ ಹಿಂಜರಿಯುವ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಅಧಿಕಾರದಲ್ಲಿರುವ ಪಕ್ಷಕ್ಕೆ ಶೇ.15ರಷ್ಟು ಅನುಕೂಲವಾಗುವ ಅನುಭವ ನಮಗಿದೆ. ನಾವೂ ಹಿಂದೆ ಬಳ್ಳಾರಿ, ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆಯಲ್ಲಿ ಗೆದ್ದರೂ

 

ನಂತರ ಚುನಾವಣೆಯಲ್ಲಿ ಸೋತಿದ್ದೆವು. ಹೀಗಾಗಿ ಯಾರೂ ಬೇಸರವಾಗುವುದು ಬೇಡ ಅಂತಾ ಹೇಳಲು ಬಯಸುತ್ತೇನೆ. ಈ ಚುನಾವಣೆಯಲ್ಲಿ ನಮ್ಮ ಕ್ಷೇತ್ರದಲ್ಲಿರುವ ಕಾರ್ಯಕರ್ತರು ಹಾಗೂ ರಾಜ್ಯದ ಕಾರ್ಯಕರ್ತರು ತಮ್ಮ ಶಕ್ತಿ ಮೀರಿ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಿದ್ದಾರೆ ಎಂದು ಹೇಳಿದರು.