ಗೆಲುವು ಸಾಧಿಸಿದ್ದು, ಬರುವ ದಿನಗಳಲ್ಲಿ ರಾಜ್ಯದಲ್ಲಿ ಇನ್ನಷ್ಟು ಕಾಂಗ್ರೆಸ್-ಜೆಡಿಎಸ್ ಮತ್ತಷ್ಟು ಶಾಸಕರು ಬಿಜೆಪಿಗೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೊಸ ಬಾಂಬ್ ಸಿಡಿಸಿದ್ದಾರೆ.

0

ತಾಳಿಕೋಟೆ:  ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬರುವ ದಿನಗಳಲ್ಲಿ ರಾಜ್ಯದಲ್ಲಿ ಇನ್ನಷ್ಟು ಕಾಂಗ್ರೆಸ್-ಜೆಡಿಎಸ್ ಮತ್ತಷ್ಟು ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೊಸ ಬಾಂಬ್ ಸಿಡಿಸಿದ್ದಾರೆ.

 

ತಾಳಿಕೋಟೆ ಪಟ್ಟಣದಲ್ಲಿ ಪುರಸಭೆ ಚುನಾವಣೆಯ ಫಲಿತಾಂಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಮಧ್ಯಪ್ರದೇಶ, ಬಿಹಾರ್, ಉತ್ತರ ಪ್ರದೇಶ ಹಾಗೂ ರಾಜ್ಯದ ಎರಡು ಕ್ಷೇತ್ರಗಳಲ್ಲಿ ನಡೆದಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದ್ದು ಬಿಜೆಪಿ ಅಲೆ ದೇಶ್ಯಾಧ್ಯಂತ ಪುಟಿದೆದ್ದಿದೆ ಕಾಂಗ್ರೆಸ್ ನಲ್ಲಿ ನಡೆದಿರುವ ಒಳ ಜಗಳದಿಂದ ಇನ್ನಷ್ಟು ಶಾಸಕರು ಬಿಜೆಪಿಯತ್ತ ಬರಲಿದ್ದಾರೆ ಎಂದು ಹೇಳಿದರು.

 

ಉಪ ಚುನಾವಣೆಯಲ್ಲಿ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷದ ನಾಯಕರ ಒಳಜಗಳ ನಮಗೆ ಲಾಭ ತಂದುಕೊಟ್ಟಿದೆ. ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ನಡುವಿನ ಒಳಜಗಳವೇ ಕಾಂಗ್ರೆಸ್ ಪಕ್ಷದ ಅವನತಿಗೆ

ಕಾರಣವಾಗಲಿದ್ದು ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದಿದ್ದಾರೆ. ಈ ಜಗಳ ಇನ್ನಷ್ಟು ವಿಕೋಪಕ್ಕೆ ಹೋಗಿ ಕಾಂಗ್ರೆಸ್ ಮತ್ತಷ್ಟು ರಾಜ್ಯದಲ್ಲಿ ಛಿದ್ರಗೊಂಡು ನೆಲಕಚ್ಚಲಿದೆ ಎಂದು ಹೇಳಿದ್ದಾರೆ.

 

ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರೇ ಸಿಎಂ ಆಗಿರಲಿದ್ದು ಮುಂದಿನ ವಿಧಾನಸಭಾ ಚುನಾವಣೆಯೂ ಅವರ ನೇತೃತ್ವದಲ್ಲಿಯೇ ನಡೆಯಲಿದೆ.