ಅರ್ನಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಇಂದು ಮಧ್ಯಂತರ ಜಾಮೀನು

0

ಹೊಸದಿಲ್ಲಿ : 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಮುಂಬೈ ಪೆÇಲೀಸರಿಂದ ಬಂಧಿಸಲ್ಪಟ್ಟಿರುವ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಅರ್ನಬ್ ಗೋಸ್ವಾಮಿ ಮಂಗಳವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜಸ್ಟಿಸ್ ಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಇಂದಿರಾ ಬ್ಯಾನರ್ಜಿ ಅವರಿದ್ದ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿದೆ.
ಅವರ ಸಿದ್ಧಾಂತ ಏನೇ ಇರಲಿ.

ಆದರೆ ಸುಪ್ರೀಂಕೋರ್ಟ್ ಇಂತಹ ವಿಷಯದಲ್ಲಿ ಮಧ್ಯೆ ಪ್ರವೇಶಿಸದಿದ್ದರೆ ನಾವು ವಿನಾಶದ ಹಾದಿ ಹಿಡಿಯುತ್ತೇವೆ. ನಾನು ಆತನ ಚಾನೆಲ್ ನೋಡುವುದೇ ಇಲ್ಲ.

ಆದರೆ ಹೈಕೋರ್ಟ್ ಗಳು ವೈಯಕ್ತಿಕ ಸ್ವಾತಂತ್ರ್ಯದ ವಿಷಯದಲ್ಲಿ ಎಡವುತ್ತಿವೆ. ಈ ಬಗ್ಗೆ ಇಲ್ಲಿಂದ ಸಂದೇಶ ರವಾನೆಯಾಗಬೇಕು. ಹೈಕೋರ್ಟ್ ಗಳು ತಮ್ಮ ಅಧಿಕಾರ ಬಳಸಿ ವೈಯಕ್ತಿಕ ಸ್ವಾತಂತ್ರ್ಯವನ್ನು ಎತ್ತಿಹಿಡಿಯಬೇಕು ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.