ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಸದುಪಯೋಗ ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

0

ಬೆಳಗಾವಿ, ನ. 12 : ಬೆಳಗಾವಿ ಜಿಲ್ಲೆಯಲ್ಲಿ 2020-21 ನೇ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪ ಹಾಗೂ ಕೀಟ/ರೋಗ ಭಾದೆಗಳಿಂದ ಅಧಿಸೂಚಿತ ಬೆಳೆಗಳಿಗೆ ವಿಮಾ ರಕ್ಷಣೆಯನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ತಾಲೂಕಿನ ಪ್ರಮುಖ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅಧಿಸೂಚಿಸಲಾಗಿದ್ದು, ರೈತರು ಸದರಿ ಬೆಳೆ ವಿಮೆ ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಹಿಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಉಸ್ತುವಾರಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಮುಂದುವರೆದು, Revamped PMFBY ಮಾರ್ಗಸೂಚಿಯನ್ವಯ ಪ್ರಸಕ್ತ ಸಾಲಿನಿಂದ ಈ ಯೋಜನೆಯು (Voluntary) ಐಚ್ಛಿಕವಾಗಿದ್ದು ಬೆಳೆ ಸಾಲ ಪಡೆದ ರೈತರಿಗೆ ಸದರಿ ಯೋಜನೆಯಿಂದ ಹೊರಗುಳಿಯುವ (Opting-Out) ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿಯಲ್ಲಿ ಒಳಪಡಿಸಬಹುದಾಗಿ,.

ಆದರೆ ಬೆಳೆಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೇ ಇದ್ದಲ್ಲಿ, ಈ ಕುರಿತು ಸಂಬಂಧಿಸಿದ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ನಿಗದಿತ ನಮೂನೆಯಲ್ಲಿ ಔಠಿಣ-ಔuಣ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.

ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಪಾಲಗೊಳ್ಳಲು ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ Opt-Out ಮುಚ್ಚಳಿಕೆ ಪತ್ರವನ್ನು ಬ್ಯಾಂಕಿನ್ ವ್ಯವಸ್ಥಾಪಕರಿಗೆ ನೀಡಬೇಕಾಗಿರುತ್ತದೆ. ರೈತ ಬಾಂಧವರು ತಮ್ಮ ವ್ಯಾಪ್ತಿಯಲ್ಲಿ ಬರತಕ್ಕಂತಹ ಬ್ಯಾಂಕ್, ಸಹಕಾರಿ ಸಂಘ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (Common Service Center) ವಿಮೆ ಕಂತನ್ನು ಪಾವತಿಸಿ ಬೆಳೆ ವಿಮೆ ನೋಂದಣಿ ಮಾಡುಬಹುದಾಗಿದೆ.

ರೈತ ಬಾಂಧವರು ತಮ್ಮ ವ್ಯಾಪ್ತಿಯಲ್ಲಿ ಬರತಕ್ಕಂತಹ ಬ್ಯಾಂಕ್, ಸಹಕಾರಿ ಸಂಘ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (Common Service Centres) ವಿಮೆ ಕಂತನ್ನು ಪಾವತಿಸಿ ಬೆಳೆ ವಿಮೆ ನೋಂದಣಿ ಮಾಡುಬಹುದಾಗಿದೆ.

ತಮ್ಮ ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಮಾನ್ಯ ಸೇವಾ ಕೇಂದ್ರಗಳ (Common Service Centres) ಹೆಚ್ಚಿನ ಮಾಹಿತಿಗಾಗಿ ಸಾಮಾನ್ಯ ಸೇವಾ ಕೇಂದ್ರಗಳ ಜಿಲ್ಲಾ ಪ್ರತಿನಿಧಿಗಳನ್ನು ದೂರವಾಣಿ ಸಂಖ್ಯೆ 9449976218 ಹಾಗೂ 9008593066 ಮೂಲಕ ಸಂಪರ್ಕಿಸಬಹುದಾಗಿದೆ.

ಪ್ರಸಕ್ತ ಹಂಗಾಮಿನಲ್ಲಿ ರೈತರು ಈ ಬೆಳೆ ವಿಮೆ ಯೋಜನೆಯಲ್ಲಿ ಪಾಲ್ಗೊಳ್ಳಲು ಹುರುಳಿ (ಮಳೆ ಆಶ್ರಿತ) ಬೆಳೆಗೆ ನವ್ಹೆಂಬರ್ 17, 2020, ಮುಸುಕಿನ ಜೋಳ (ನೀರಾವರಿ) ಮತ್ತು ಗೋಧಿ (ನೀರಾವರಿ) ಬೆಳೆಗಳಿಗೆ ಡಿಸೆಂಬರ್ 16, 2020 ಹಾಗೂ ಉಳಿದ ಎಲ್ಲಾ ಅಧಿಸೂಚಿತ ಬೆಳೆಗಳಿಗೆ ನವ್ಹೆಂಬರ್ 30, 2020 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ರೈತ ಬಾಂಧವರು ಸ್ಥಳೀಯ ಬ್ಯಾಂಕ್‍ಗಳು, ಸಹಕಾರ ಸಂಘಗಳು, ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಹಾಗೂ ವಿಮಾ ಸಂಸ್ಥೆಯ ಪ್ರತಿನಿಧಿಗಳನ್ನು 8105412415 ಹಾಗೂ 9152007779 ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////