ನಾಪತ್ತೆ ಆಗಿದ್ದ ಇಬ್ಬರು ಯುವಕರು ಶವವಾಗಿ ಪತ್ತೆ…

0

ಬೆಳಗಾವಿ, ನ. 16- ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಇಬ್ಬರು ಖಾನಾಪುರ ತಾಲ್ಲೂಕಿನ ಅಸೋಗಾ ಬಳಿಯ ಅಲಾತ್ರಿ ಹಳ್ಳದಲ್ಲಿ ಸೋಮ ವಾರ ಶವವಾಗಿ ಪತ್ತೆಯಾಗಿದ್ದಾರೆ.

ಖಾನಾಪುರದವರೇ ಆದ ಉಮರ್ ಖಲೀಫ (16) ಹಾಗೂ ಅರ್ಫಾತ್ ಅರಕಾಟಿ (16) ಮೃತ ಯುವಕರು ಆಗಿದ್ದಾರೆ…  ಅವರು ಗುರುವಾರ ಮಧ್ಯಾಹ್ನ ಮನೆಯಿಂದ ಹೊರಗೆ ಹೋಗಿದ್ದರು. ಸಂಜೆಯಾದರೂ ಬಂದಿರಲಿಲ್ಲ. ಮನೆಯವರು ಹುಡುಕಾಟ ನಡೆಸಿದರೂ. ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಶನಿವಾರ ಸಂಜೆ ಅವರ ಬಟ್ಟೆ ಮತ್ತು ಮೊಬೈಲ್ ಅಲಾತ್ರಿ ಹಳ್ಳದ ದಡದಲ್ಲಿ ಸಿಕ್ಕಿತ್ತು. ಇದನ್ನು ಆಧರಿಸಿ ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಸೋಮವಾರ ಬೆಳಿಗ್ಗೆ ಮೃತದೇಹಗಳು ಪತ್ತೆಯಾಗಿವೆ. ಪ್ರಾಥಮಿಕ ಮಾಹಿತಿ ಪ್ರಕಾರ ಈಜಲು ಹೋಗಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.