ಜಿಲ್ಲಾ ಆಸ್ಪತ್ರೆಯಲ್ಲಿ ಹಿಂದಿನಂತೆ ಹೊರ ರೋಗಿಗಳ ವಿಭಾಗ ಹಾಗೂ ಇತರ ಎಲ್ಲ ಆರೋಗ್ಯ ಸೇವೆ ಗಳನ್ನು ಸಾರ್ವಜನಿಕರಿಗೆ ನೀಡಲಿದೆ : ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ

0

ಬೆಳಗಾವಿ, ನ. 17- ಕರೋನಾ ವೈರಸ್ ಕಾಣಿಸಿಕೊಂಡ ನಂತರ ‘ಕೋವಿಡ್-19 ನಿಗದಿತ ಆಸ್ಪತ್ರೆ’ಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಆಸ್ಪತ್ರೆಯಲ್ಲಿ ಹಿಂದಿನಂತೆ ಹೊರ ರೋಗಿಗಳ ವಿಭಾಗ ಹಾಗೂ ಇತರ ಎಲ್ಲ ಆರೋಗ್ಯ ಸೇವೆ ಗಳನ್ನು ಸಾರ್ವಜನಿಕರಿಗೆ ನೀಡಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

 

ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ವೇಳೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಘೋಷಿಸಲಾಗಿತ್ತು.

ಇತ್ತೀಚೆಗೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಇಳಿ ಮುಖವಾಗಿದೆ. ಆದ್ದರಿಂದ ಜಿಲ್ಲಾ ಆಸ್ಪತ್ರೆಯನ್ನು ಇತರ ಕಾಯಿ ಲೆಗಳ ಚಿಕಿತ್ಸೆಗೂ ಮುಕ್ತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

‘ಆಸ್ಪತ್ರೆಯ ಒಂದು ವಿಭಾಗವನ್ನು ಕೋವಿಡ್-19 ಚಿಕಿತ್ಸೆಗೆ ಮೀಸಲಿಡಲಾಗಿದೆ. ಉಳಿದ ವಿಭಾಗಗಳಲ್ಲಿ ಮೊದಲಿನಂತೆ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ. ಈ ಸೌಲಭ್ಯಗಳನ್ನು ಜಿಲ್ಲೆಯ ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.