ವಿಕಲಚೇತನರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಉದ್ದೇಶ. ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ,

0

 

ಬೆಳಗಾವಿ : ವಿಕಲಚೇತನರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಉದ್ದೇಶ

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿ.ಪಂ.ಬೆಳಗಾವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ, ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ವಿಕಲಚೇತನ ಫಲಾನುಭವಿಗಳಿಗೆ ಉಚಿತ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ

ಯವರು ವಿತರಣೆ ಮಾಡಿದರು.

ಸಾಮಾನ್ಯ ವ್ಯಕ್ತಿಗಳಿಗಿಂತ ದಿವ್ಯಾಂಗರು ಸಮಾಜದಲ್ಲಿ ಒಂದು ಹೆಜ್ಜೆ ಮುಂದೆ ಬರಬೇಕು. ಅಂಗವಿಕರಿಗೆ ಅತಿ ಅನುಕಂಪ ಬೇಡ. ಅವರಿಗೆ ಅವಕಾಶ ಬೇಕು. ಹೀಗಾಗಿ ಅವರಿಗೆ ಆತ್ಮವಿಶ್ವಾಸ ಹಾಗೂ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ನಮ್ಮ ಸರ್ಕಾರ ವಿಕಲಚೇತನ ಫಲಾನುಭವಿಗಳಿಗೆ ಉಚಿತ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ ಮಾಡುತ್ತಿದೆ. ಸಿಕ್ಕಿರುವ ಸೌಲಭ್ಯವನ್ನು ಎಲ್ಲರು ಉತ್ತಮ ರೀತಿಯಲ್ಲಿ ಬಳಸಿಕೊಂಡು, ಸಾಧನೆಯ ಮೆಟ್ಟಿಲೇರಲು ಪಣ ತೊಡಿ. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ವಿಕಲಚೇತನರ ಏಳಿಗೆಗಾಗಿ ಇನ್ನಷ್ಟು ಸೌಲಭ್ಯ ಒದಗಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿ‌ಸಿದರು.