ಈ ಬಾರಿ ಬಿಜೆಪಿಯಿಂದ ಕಲ್ಲು ನಿಂತರೂ ಗೆಲ್ಲುತ್ತದೆ ಎಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಮಾಜಿ ಶಾಸಕ ಸಂಜಯ ಪಾಟೀಲ ವಿಶ್ವಾಸ

0

ಬೆಳಗಾವಿ-ಬೆಳಗಾವಿ ಲೋಕಸಭಾ ಉಪ ಚುನಾವಣೆಯ ದಿನಾಂಕ ಇನ್ನುವರೆಗೆ ಘೋಷಣೆ ಆಗಿಲ್ಲ ಆದ್ರೆ ಈ ಬಾರಿ ಬಿಜೆಪಿಯಿಂದ ಕಲ್ಲು ನಿಂತರೂ ಗೆಲ್ಲುತ್ತದೆ ಎಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ವಿಶ್ವಾಸ ವ್ಯೆಕ್ತಪಡಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ,ಮಾದ್ಯಮಗಳ ಜೊತೆ ಮಾತನಾಡಿದ ಅವರು,ಬಿಜೆಪಿಯಲ್ಲಿ ಬಹಳಷ್ಟು ಜನ ಆಕಾಂಕ್ಷಿಗಳಿದ್ದಾರೆ,

ಈ ವಿಚಾರದಲ್ಲಿ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರವೇ ಅಂತಿಮ,ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸಂಜಯ ಪಾಟೀಲ ಹೇಳಿದರು.

ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ದಿಸಲು ನಾನೂ , ಆಕಾಂಕ್ಷಿ ಅಲ್ಲ, ಆದ್ರೆ ನಾನೇನು ರಾಜಕೀಯ ಸನ್ಯಾಸಿ ಅಲ್ಲ,ಪಕ್ಷದ ಹಿರಿಯರು ನನ್ನನ್ನು ಗುರುತಿಸಬಹುದು ಎಂದು ಸಂಜಯ ಪಾಟೀಲ ಹೇಳಿದ್ದಾರೆ.

ಕಾಂಗ್ರೆಸ್ಸಿನಿಂದ ಈ ಬಾರಿ ಪ್ರಬಲ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಅವರನ್ನು ಕಣಕ್ಕಿಳಿಸುತ್ತಿದ್ದಾರೆ,ಎಂದು ಮಾದ್ಯಮ ಮಿತ್ರರು ಪ್ರಶ್ನೆ

ಮಾಡಿದಾಗ,ಚನ್ನರಾಜ ಹಟ್ಟಿಹೊಳಿ ಅವರು ಪ್ರಬಲ ಅಬ್ಯರ್ಥಿ ಅನ್ನೋದಾದ್ರೆ ಅದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಅವಮಾನ ಎಂದು ಸಂಜಯ ಪಾಟೀಲ ಹೇಳಿದರು.