ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ

0

ಬೆಳಗಾವಿ : ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಸಮಿತಿ ಚರ್ಚೆ ಮಾಡಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.

ಈ ಚುನಾವಣೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿಯೇ ನಡೆಯುತ್ತದೆ ಎಂದು ಮಾಜಿ ಸಚಿವ ಅದ್ಯಕ್ಷ ಎಂ.ಬಿ ಪಾಟೀಲ ಸ್ಪಷ್ಟಪಡಿಸಿದರು.


ಬೆಳಗಾವಿ ಲೋಕಸಭೆ ಕ್ಷೇತ್ರ ಬಿಜೆಪಿಯ ಭದ್ರಕೋಟೆ, ಕಳೆದ ನಾಲ್ಕು ಅವಧಿಯಲ್ಲಿ ಬಿಜೆಪಿಯಿಂದ ಸುರೇಶ ಅಂಗಡಿ ಸತತವಾಗಿ ಗೆಲ್ಲುತ್ತಾ ಬಂದಿದ್ದರು. ಆದ್ರೆ ಅವರ ಅಕಾಲಿಕ ಮರಣದಿಂದ ಕ್ಷೇತ್ರ ಈಗ ತೆರವಾಗಿದೆ. ಬೈಎಲೆಕ್ಷನ್‍ಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ತೀವ್ರ ಕಸರತ್ತು ಆರಂಭಿಸಿದ್ದಾರೆ.

ಶನಿವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್‍ನಿಂದ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬ ಕುರಿತು ಅಭಿಪ್ರಾಯ ಸಂಗ್ರಹಿಸಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಜಿ ಸಚಿವ ಎಂ.ಬಿ.ಪಾಟೀಲ್‍ರ ಅಧ್ಯಕ್ಷತೆಯಲ್ಲಿ 11 ಸದಸ್ಯರ ಸಮಿತಿಯನ್ನು ರಚನೆ ಮಾಡಿದ್ದಾರೆ. ಇದರಿಂದ ಮೊದಲ ಹಂತದ ಸಭೆಯನ್ನು ಈ ಸಮಿತಿ ಮಾಡಿದೆ. ಈ ವೇಳೆ ಸಮಿತಿ ಸದಸ್ಯರು, ಜಿಲ್ಲೆಯ ಕಾಂಗ್ರೆಸ್ ಮುಖಂಡರಿಂದ ಎಂ.ಬ.ಪಾಟೀಲ್ ಅಭಿಪ್ರಾಯ ಸಂಗ್ರಹಿಸಿದರು.

ಮುಖಂಡರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಇಂದು ನಡೆದ ಸಭೆಯಲ್ಲಿ ಎಲ್ಲ ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ. ಚುನಾವಣೆಗೆ ಸ್ಪರ್ಧಿಸಲು ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ.

ಎಲ್ಲ ಸಮುದಾಯದ ನಾಯಕರಿಂದಲೂ ಅರ್ಜಿಗಳು ಬಂದಿವೆ. ಈ ಎಲ್ಲವನ್ನೂ ಮತ್ತೊಮ್ಮೆ ಪರಾಮರ್ಶೆ ಮಾಡುತ್ತೇವೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಸಭೆಯಲ್ಲಿ ಕಾಂಗ್ರೆಸ್ ಸಮಿತಿ ಸಂಚಾಲಕರಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಸಚಿವ ಎಚ್.ಎಂ.ರೇವಣ್ಣ,

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಎಂಎಲ್‍ಸಿ ಶ್ರೀನಿವಾಸ್ ಮಾನೆ, ಮಾಜಿ ಶಾಸಕರಾದ ಅಶೊಕ ಪಟ್ಟಣ, ಫಿರೋಜ್ ಸೇಠ್, ವೀರಕುಮಾರ ಪಾಟೀಲ ಸೇರಿ ಹಲವು ಕೈ ಮುಖಂಡರು ಭಾಗಿಯಾಗಿದ್ದರು.