ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆ ಅಗಲೀಕರಣ ಕೆಲಸವನ್ನು ಕೈಗೊಳ್ಳುತ್ತಿರುವುದರಿಂದ ಹಾಗೂ ವಿದ್ಯುತ್ ಮಾರ್ಗಗಳ ಸ್ಥಳಾಂತರ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ನವೆಂಬರ್ 25 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆ

0

ಬೆಳಗಾವಿ, ನ.23. : ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆ ಅಗಲೀಕರಣ ಕೆಲಸವನ್ನು ಕೈಗೊಳ್ಳುತ್ತಿರುವುದರಿಂದ ಹಾಗೂ ವಿದ್ಯುತ್ ಮಾರ್ಗಗಳ ಸ್ಥಳಾಂತರ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ನವೆಂಬರ್ 25 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.

110 ಕೆ.ವ್ಹಿ. ಹುದಲಿ ಉಪಕೇಂದ್ರದಿಂದ ಸರಬರಾಜು ಆಗುವ ಮುಚ್ಚಂಡಿ, ಅಷ್ಟೆ, ಚಂದಗಡ, ಖನಗಾಂವ ಕೆ.ಎಚ್, ಖನಗಾಂವ ಬಿ.ಕೆ, ಚಂದೂರ, ಕೆಂಪದಿನ್ನಿ, ಭೀಮಗಡ, ಸಿದ್ದನಹಳ್ಳಿ, ಕಬಲಾಪೂರ, ಸೋಮನಟ್ಟಿ, ಕರಿಕಟ್ಟಿ,

ತುಮ್ಮರಗುದ್ದಿ ಹಾಗೂ ಕಲಕಾಂಬ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಗ್ರಾಮೀಣ ಭಾಗದ ಕಾರ್ಯ ನಿರ್ವಾಹಾಕ ಇಂಜಿನಿಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.