ಸಂಗೊಳ್ಳಿ ರಾಯಣ್ಣ ಮಹಾವಿದ್ಯಾಲಯಕ್ಕೆ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಭೇಟಿ

0

 

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯಕ್ಕೆ ಮಂಗಳವಾರ 24 ರಂದು ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಅವರು ಭೇಟಿ ನೀಡಿ ಮಹಾವಿದ್ಯಾಲಯದ ನೂತನ ಕಟ್ಟಡದ ಪ್ರಗತಿ ಹಾಗೂ ಕಾಲೇಜಿನ ಚಟುವಟಿಕೆಗಳನ್ನು ಪರೀಶಿಲಿಸಿ ಪ್ರಶಂಸಿಸಿದರು.

ಅಲ್ಲದೇ ಎರಡನೇಯ ಹಂತದ ಕಟ್ಟಡದ ಮಾದರಿಯನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಮಹಾವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಆನ್‍ಲೈನ್ ಅಥವಾ ಆಫ್‍ಲೈನ್ ತರಗತಿಗಳ ಅವಶ್ಯಕತೆ ಕುರಿತು ಚರ್ಚಿಸಿ, ವಿದ್ಯಾರ್ಥಿಗಳು ಆನ್‍ಲೈನ್ ಬದಲಾಗಿ ಆಫ್‍ಲೈನ್ ತರಗತಿಗಳ ಬಗ್ಗೆ ಒಲವು ಹರಿಸಬೇಕೆಂದರು

ಈ ವೇಳೆ ಶಾಸಕ ಅನಿಲ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ಪಾಲಿಕೆಯ ಆಯುಕ್ತ ಕೆ.ಹೆಚ್. ಜಗದೀಶ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಬಸವರಾಜ ಪದ್ಮಶಾಲಿ, ಸಿಂಡಿಕೇಟ್ ಸದಸ್ಯ ಡಾ. ಆನಂದ ಹೊಸುರ, ಕಾಲೇಜಿನ ಪ್ರಾಚಾರ್ಯ ಡಾ. ಎಂ. ಜಯಪ್ಪ, ಉಪಪ್ರಾಚಾರ್ಯ ಅನಿಲ ರಾಮದುರ್ಗ ಹಾಗೂ ಇತರರು ಇದ್ದರು.