ಸರಳ ಹಾಗೂ ಸಾಕೇಂತಿಕವಾಗಿ ಕನಕದಾಸ ಜಯಂತಿ ಆಚರಣೆ: ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ

0

ಸರಳ ಹಾಗೂ ಸಾಕೇಂತಿಕವಾಗಿ ಕನಕದಾಸ ಜಯಂತಿ ಆಚರಣೆ: ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ
ಬೆಳಗಾವಿ, ನ 25 (ಕರ್ನಾಟಕ ವಾರ್ತೆ): ಕೋವಿಡ್-19 ಹಿನ್ನೆಲೆಯಲ್ಲಿ ಡಿ.3 ರಂದು ಕನಕದಾಸ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ನ.25) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಿ.3 ರಂದು ಬೆಳಿಗ್ಗೆ 9.30 ಗಂಟೆಗೆ ಬುಡಾ ಕಚೇರಿ ಬಳಿಯಿರುವ ಕನಕದಾಸ ವೃತ್ತದಲ್ಲಿ ಕನಕದಾಸ ಭಾವಚಿತ್ರಕ್ಕೆ ಮಾಲಾರ್ಪಣೆ ನಡೆಯಲಿದ್ದು ಇದಾದ ಬಳಿಕ ರಂಗಮಂದಿರದ ಆವರಣದಲ್ಲಿರುವ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಹಾಗೂ ಕನಕದಾಸರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಈ ಕುರಿತು ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರಳ ರೀತಿಯಲ್ಲಿ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ಬೆಳಗಾವಿ ಉಪ ಪೊಲೀಸ್ ಆಯುಕ್ತರಾದ ಚಂದ್ರಶೇಖರ್ ನೀಲಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ವಿದ್ಯಾವತಿ ಭಜಂತ್ರಿ ಹಾಗೂ ಸಮಾಜ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.