ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬುಧವಾರ ರಾತ್ರಿ ದೆಹಲಿಗೆ ತೆರಳಿದ್ದು, ಗುರುವಾರ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ

0

ಬೆಂಗಳೂರು, ನ. 26- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬುಧವಾರ ರಾತ್ರಿ ದೆಹಲಿಗೆ ತೆರಳಿದ್ದು, ಗುರುವಾರ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ವರಿಷ್ಠರು ಜಾರಕಿಹೊಳಿ ಅವರನ್ನು ಕರೆಸಿಕೊಂಡಿರುವುದು ರಾಜ್ಯ ಬಿಜೆಪಿ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯ ರಾಜಕಾರಣ ವಿಚಾ ರವಾಗಿ ಚರ್ಚೆ ನಡೆಸಲಿದ್ದಾರೋ ಅಥವಾ ಮಹಾರಾಷ್ಟ್ರ ರಾಜಕಾರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುತ್ತಾರೋ ಎಂಬುದು ತಿಳಿದು ಬಂದಿಲ್ಲ.

ಜಾರಕಿಹೊಳಿ ಆಪ್ತರ ಪ್ರಕಾರ, ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಪುನಃ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಜಾರಕಿಹೊಳಿ ಯವರ ನೆರವು ಪಡೆದು ಕೊಳ್ಳಲಾಗುತ್ತಿದೆ.

ಬುಧವಾರ ಬೆಳಿಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಜಾರಕಿಹೊಳಿ, ‘ಪಕ್ಷದ ನಾಯಕರಿಂದ ಕರೆ ಬಂದಿದ್ದು, ಭೇಟಿ ಯಾಗಲು ಹೋಗುತ್ತಿದ್ದೇನೆ’ ಎಂದು ಹೇಳಿದರು. ಪಕ್ಷದಲ್ಲಿ ನಾನೇನು ಪ್ರಭಾವಿ ನಾಯಕನಲ್ಲ. ನನ್ನನ್ನು ಮಾಧ್ಯಮದಲ್ಲಿ ಶಕ್ತಿಶಾಲಿ ನಾಯಕ ಎಂಬಂತೆ ಬಿಂಬಿಸಲಾಗುತ್ತಿದೆ.

ಅದಕ್ಕೆ ನಾನೇನು ಮಾಡಲು ಆಗಲ್ಲ. ನಾನು ಉಪಮುಖ್ಯಮಂತ್ರಿ ಸ್ಥಾನವೂ ಸೇರಿದಂತೆ ಯಾವುದೇ ಬೇಡಿಕೆ ಇಟ್ಟಿಲ್ಲ. ಮುಖ್ಯಮಂತ್ರಿ ಯಡಿ ಯೂರಪ್ಪ ಅವರು ಕೊಟ್ಟಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ’ ಎಂದರು.

ಕೆಲವು ಸಚಿವರು ಮತ್ತು ಶಾಸಕರು ನೀರಾವರಿ ವಿಷಯಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ನನ್ನ ಬಳಿ ಬರುತ್ತಾರೆ. ಅದಕ್ಕೆ ರಾಜಕೀಯ ಅರ್ಥ ಕಲ್ಪಿಸಬೇಕಾಗಿಲ್ಲ’ ಎಂದು ಹೇಳಿದರು.

‘ಸಿ.ಪಿ.ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವಂತೆ ಪಕ್ಷದ ಮುಖಂ ಡರ ಜತೆ ಮಾತನಾಡುತ್ತೇನೆ.

ಅದು ನನ್ನ ಕರ್ತವ್ಯ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೊಟ್ಟರೂ ಸರಿ, ಕೊಡದಿದ್ದರೂ ಸರಿ ಯಾರೂ ಬೇಸರ ಮಾಡಿಕೊಳ್ಳಬೇಕಾಗಿಲ್ಲ’ ಎಂದರು..