ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಆಹ್ವಾನ

0

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಬೆಳಗಾವಿ, ನ 26 : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ Zomato , Swiggy , Uber ets , Amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಯುವಕರಿಗೆ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ -1, ಪ್ರವರ್ಗ -2ಎ, 3ಎ ಮತ್ತು 3ಬಿಗೆ ಸೇರಿದ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ (ವಿಶ್ವಕರ್ಮ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ .25000 / -ಗಳ ಸಹಾಯಧನ ” ಹಾಗೂ ಉಳಿದ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯಬೇಕಾಗಿದೆ.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನೆ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ . ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು .
ಈ ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಈ ಹಿಂದುಳಿದ ವರ್ಗದ ಫಲಾಪೇಕ್ಷಿಗಳು, ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಅರ್ಜಿಗಳನ್ನು ಪಡೆಕೊಳ್ಳಬಹುದು ಅಥವಾ ನಿಗಮದ ವೆಬ್‍ಸೈಟ್ WWW.dbcdc.karnataka.gov.in ಇಲ್ಲಿ ಪಡೆಯಬಹುದಾಗಿರುತ್ತದೆ .
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ / ದಾಖಲಾತಿಗಳೊಂದಿಗೆ ಆನ್‍ಲೈನ್ ಅಥವಾ ಆಫ್ ಲೈನ್ ಮೂಲಕ ಡಿಸೆಂಬರ 12ರೊಳಗೆ ಸಲ್ಲಿಸುವುದು, 19ರ ನಂತರ ಬರುವಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ : www.dbcdc.karnataka.gov.in ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಸಂಪರ್ಕಿಸಬೆಕೆಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.///

ದೀನ ದಯಾಳ ಅಂತ್ಯೋದಯ ಯೋಜನೆಯ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಬೆಳಗಾವಿ, ನ 26 : ದೀನ ದಯಾಳ ಅಂತ್ಯೋದಯ ಯೋಜನೆಯ ಕೌಶಲ್ಯ ತರಬೇತಿಯ ಮೂಲಕ ಉದ್ಯೋಗ ಹಾಗೂ ವಿವಿಧ ತರಬೇತಿಯನ್ನು ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2019-20 ನೇ ಸಾಲಿನ ದೀನ ದಯಾಳ ಅಂತ್ಯೋದಯ ಯೋಜನೆಯ ಕೌಶಲ್ಯ ತರಬೇತಿಯ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಘಟಕದಡಿ ರಾಮದುರ್ಗ ಪಟ್ಟಣ ಪ್ರದೇಶದಲ್ಲಿ ವಾಸಿಸುತ್ತಿರುವ 18 ರಿಂದ 40 ವರ್ಷ ವಯೋಮಿತಿಯ ಬಡತನ ರೇಖೆಗಿಂತ ಕೆಳಗೆ ಇರುವ ಅಭ್ಯರ್ಥಿಗಳಿಗೆ ವಿವಿಧ ತರಬೇತಿಗಳನ್ನು ಉಚಿತವಾಗಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ .
ಆಸಕ್ತರು ಡಿಸೆಂಬರ 15 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶ್ರೀಮತಿ ಎಮ್ ಎಸ್ ಕೌಜಲಗಿ ಸಮುದಾಯ ಸಂಘಟನಾಧಿಕಾರಿಗಳು ಇವರನ್ನು ಸಂಪರ್ಕಿಸಲು ಶ್ರೀ ಎಸ್ ಜಿ ಅಂಬಿಗೇರ ಮುಖ್ಯಾಧಿಕಾರಿಗಳು ಪುರಸಭೆ ರಾಮದುರ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

ಒಂದು ದಿನದ ಯುವ ಸೌರಭ ಹಾಗೂ ಚಿಗುರು ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ, ನ 26  ಕನ್ನಡ ಮತ್ತು ಸಂಸÀ್ಕøತಿ ಇಲಾಖೆಯಿಂದ ಒಂದು ದಿನದ ಯುವ ಸೌರಭ ಹಾಗೂ ಚಿಗುರು ಕಾರ್ಯಕ್ರಮಗಳಿಗೆ ಆಸಕ್ತ ಯುವ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
ಚಿಗುರು ಕಾರ್ಯಕ್ರಮದಲ್ಲಿ 6 ರಿಂದ 14 ವರ್ಷ ವಯೋಮಾನದ ಪ್ರತಿಭಾವಂತ ವಿದ್ಯಾರ್ಥಿಗಳು ಜಾನಪದ ಕಲೆ, ಜಾನಪದ ಸಂಗೀತ, ಶಾಸ್ತ್ರೀಯ ನೃತ್ಯ, ಮುಂತಾದ ಸಮೂಹ ಕಾರ್ಯಕ್ರಮಗಳನ್ನು ಪ್ರದರ್ಶಿಸಬಹುದು.
ಯುವ ಸೌರಭ ಕಾರ್ಯಕ್ರಮದಲ್ಲಿ 15 ರಿಂದ 30 ವರ್ಷ ವಯೋಮಾನದೊಳಗಿನ ವಿದ್ಯಾರ್ಥಿಗಳು ಜಾನಪದ ಕಲೆ, ಜಾನಪದ ಸಂಗೀತ, ಶಾಸ್ತ್ರೀಯ ನೃತ್ಯ, ನಾಟಕ ಮುಂತಾದ ಸಮೂಹ ಕಾರ್ಯಕ್ರಮಗಳನ್ನು ಪ್ರದರ್ಶಿಸಬಹುದು.
ಆಸಕ್ತ ಯುವ ಕಲಾವಿದರು ನವೆಂಬರ 28ರ ಒಳಗಾಗಿ ಅರ್ಜಿ ಸಲ್ಲಿಸಬೆಕೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 0831-2474649 ಗೆ ಸಂಪರ್ಕಿಸಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೆಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.////

 

ಒಂದು ದಿನದ ಯುವ ಸೌರಭ ಹಾಗೂ ಚಿಗುರು ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ, ನ 26 ನಾಡಿನ ಕಲೆ, ಸಾಹಿತ್ಯ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಶ್ಕøತಿ ಇಲಾಖೆಯಿಂದ 2020-21 ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ.
1. ನೋಂದಾಯಿತ ಸಾಂಸ್ಕೃತಿಕ ಸಂಘ ಸಂಸ್ಥೆಗಳು ಏರ್ಪಡಿಸುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಧನಸಹಾಯ 2. ಅಸಂಘಟಿತ ತಂಡಗಳು/ಏಕವ್ಯಕ್ತಿ ಕಲಾವಿದರಿಗೆ ವಾದ್ಯಪರಿಕರ/ವೇಷಭೂಷಣ ಖರೀದಿಗೆ ಧನಸಹಾಯ 3. ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ/ತಂಡದ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಧನಸಹಾಯ
ಈ ಮೇಲೆ ತಿಳಿಸಿರುವ 03 ಯೋಜನೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು Sevasindhu.karnataka.gov.in ಮುಖಾಂತರ ನವೆಂಬರ 26 ರಿಂದ ಡಿಸೆಂಬರ 27ರ ವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಗಸೂಚಿಗಳನ್ನು ಸೇವಾಸಿಂಧು ಪೆÇೀರ್ಟಲ್ ಹಾಗೂ ಇಲಾಖೆಯ ವೆಬ್ ಸೈಟ್: www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 080-22230282 / 080-22279954 ಗೆ ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೆಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.////