ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಲೈಸೆನ್ಸ್ ರದ್ದು ಮಾಡುವುದರ ಜತೆಗೆ ಅಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ

0

ತಂಬಾಕು ಮಾರಾಟ; ಅಂಗಡಿ ತೆರವು- ಜಿಲ್ಲಾಧಿಕಾರಿ ಎಚ್ಚರಿಕೆ

ಬೆಳಗಾವಿ, ನ.26  : ದಂಡ ವಿಧಿಸಿದ ಬಳಿಕವೂ ನಿಯಮಾವಳಿ ಮೀರಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಲೈಸೆನ್ಸ್ ರದ್ದು ಮಾಡುವುದರ ಜತೆಗೆ ಅಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.


ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ (ನ.26) ನಡೆದ ಕೋಟ್ಪಾ ಕಾಯ್ದೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿμÉೀಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಶಿಕ್ಷಕರು ಸೇರಿದಂತೆ ಎಲ್ಲ ಸರ್ಕಾರಿ ನೌಕರರು ತಂಬಾಕು ಮಾರಾಟ ತಡೆಯಲು ಕೈಜೋಡಿಸಬೇಕು. ಕೋಟ್ಪಾ ಕಾಯ್ದೆಯಡಿ ಹೆಚ್ಚು ಹೆಚ್ಚು ಪ್ರಕರಣಗಳನ್ನು ದಾಖಲಿಸಿ, ದಂಡ ವಿಧಿಸಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆ ನೇತೃತ್ವದಲ್ಲಿ ದಾಳಿ ನಡೆಸುವ ಸಂದರ್ಭದಲ್ಲಿ ಪೆÇಲೀಸ್ ಇಲಾಖೆ ಕೂಡ ಅಗತ್ಯ ನೆರವು ನೀಡಬೇಕು.
ಸಿಗರೇಟು ಹಾಗೂ ಇತರೆ ತಂಬಾಕು ಉತ್ಪನ್ನಗಳ(ಕೋಟ್ಪಾ) ಕಾಯ್ದೆಯ ಸೆಕ್ಷನ್ 4 ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿμÉೀಧಿಸಲಾಗಿದೆ.

ಸೆಕ್ಷನ್ 5 ರ ಪ್ರಕಾರ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತುಗಳು ನಿμÉೀಧಿತವಾಗಿದ್ದು, ಸೆಕ್ಷನ್ 6(ಎ) ಅನ್ವಯ ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ನಿμÉೀಧಿಸಿರುವುದರಿಂದ ಇದು ಕಡ್ಡಾಯವಾಗಿ ಜಾರಿಗೆ ತರಲು ಎಲ್ಲ ಇಲಾಖೆಯ ಅಧಿಕಾರಿಗಳು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು.

ಜಿಲ್ಲೆಯ ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿತಾಣಗಳಲ್ಲಿ ತಂಬಾಕು ಮಾರಾಟ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.
ಪ್ರತಿ ತಾಲ್ಲೂಕಿನಲ್ಲಿ ಈ ರೀತಿಯ ಕಠಿಣ ಕ್ರಮ ಕೈಗೊಂಡರೆ ಕಾನೂನುಬಾಹಿರ ಮಾರಾಟ ತಡೆಗಟ್ಟಬಹುದು ಎಂದರು.

ಕೈಗಾರಿಕೆಗಳ ಆವರಣದಲ್ಲಿ ತಂಬಾಕು, ಸಿಗರೇಟು ಸೇವನೆ ನಿಯಂತ್ರಣಕ್ಕೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು.
ಸಾರಿಗೆ ಇಲಾಖೆಯ ಅಧಿಕಾರಿಗಳು ಬಸ್ ನಿಲ್ದಾಣದಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಬಸವರಾಜ ತುಕ್ಕಾರ ಮಾತನಾಡಿ, ಭಾರತದಲ್ಲಿ ಪ್ರತಿದಿನ ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ 2700 ಜನರು ಸಾವನ್ನಪ್ಪುತ್ತಿದ್ದಾರೆ ಎಂದು ವಿವರಿಸಿದರು.

ಜಿಲ್ಲೆಯ 6000 ಕ್ಕೂ ಅಧಿಕ ಶಾಲೆಗಳಿದ್ದು, ಈ ಎಲ್ಲ ಶಾಲಾ ಆವರಣದಲ್ಲಿ ತಂಬಾಕು ಮಾರಾಟ ಸಂಪೂರ್ಣವಾಗಿ ನಿμÉೀಧಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ತಂಬಾಕು, ಸಿಗರೇಟು ಮಾರಾಟಕ್ಕೆ ಕಡಿವಾಣ ಹಾಕಬಹುದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದರು.

ಜಿಲ್ಲೆಯ ಕೆಲ ತಾಲ್ಲೂಕುಗಳಲ್ಲಿ ತಂಬಾಕು ಬೆಳೆಯ ಬದಲು ಪರ್ಯಾಯ ಬೆಳೆಗಳನ್ನು ಬೆಳೆಯಲು ಕೃಷಿ ಇಲಾಖೆಯಿಂದ ಪೆÇ್ರೀತ್ಸಾಹ ಒದಗಿಸಬೇಕು ಎಂದು ಡಾ.ತುಕ್ಕಾರ್ ಮನವಿ ಮಾಡಿಕೊಂಡರು.

ಮಹಾನಗರ ಪಾಲಿಕೆ ಆಯುಕ್ತರಾದ ಜಗದೀಶ್, ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೆÇಲೀಸ್ ಆಯುಕ್ತರಾದ ಚಂದ್ರಶೇಖರ್ ನೀಲಗಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 

ಜಿಲ್ಲಾಧಿಕಾರಿ ಹಿರೇಮಠ ಸೂಚನೆ

ಬೆಳಗಾವಿ, ನ.26 : ಎಚ್.ಐ.ವಿ/ಏಡ್ಸ್ ಪೀಡಿತರಿಗೆ ರೇಷನ್ ಕಾರ್ಡು, ವೈದ್ಯಕೀಯ ಸೌಲಭ್ಯ, ಶಾಲಾ ಪ್ರವೇಶ, ವಿದ್ಯಾರ್ಥಿ ವೇತನ, ವಸತಿ ಯೋಜನೆಯಡಿ ವಸತಿ ಸೇರಿದಂತೆ ಸರ್ಕಾರದಿಂದ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಏಮ್.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ(ನ.26) ನಡೆದ ಜಿಲ್ಲಾ ಮಟ್ಟದ ಎಚ್.ಐ.ವಿ./ಏಡ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಚ್.ಐ.ವಿ. ಸೋಂಕಿತರಿಗೆ ಖಾಸಗಿ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿದರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಶಾಲೆಗಳಲ್ಲಿ ಮಕ್ಕಳಿಗೆ ತಾರತಮ್ಯ ಆಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲಿಯೇ ತಾರತಮ್ಯ ಅಥವಾ ಕಿರುಕುಳ ಕಂಡುಬಂದರೆ ಪೆÇಲೀಸ್ ಪ್ರಕರಣವನ್ನು ದಾಖಲಿಸಬೇಕು.

ಇಂತಹ ಪ್ರಕರಣದಲ್ಲಿ ಸೋಂಕಿತರ ಬಗ್ಗೆ ಸಹಾನುಭೂತಿಯಿಂದ ನಡೆದುಕೊಳ್ಳಬೇಕು ಎಂದು ಪೆÇಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಆರೋಗ್ಯ ಇಲಾಖೆ ಸೇರಿದಂತೆ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೆÇಲೀಸ್, ಕಾರ್ಮಿಕ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಯವರು ತಮ್ಮ ವ್ಯಾಪ್ತಿಯಲ್ಲಿ ಬರುವ ನೆರವು ನೀಡಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು.

ಸೋಂಕಿತರಿಗೆ ಏಕಗವಾಕ್ಷಿ ವ್ಯವಸ್ಥೆಯಡಿ ನೀಡಲಾಗುವ ಸಹಾಯ-ಸೌಲಭ್ಯಗಳಿಗೆ ಸಂಬಂಧಿಸಿದಂತೆ ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಸುತ್ತೋಲೆ ಮತ್ತು ಆದೇಶ ಪ್ರತಿಗಳನ್ನು ಎಲ್ಲರಿಗೂ ಒದಗಿಸಬೇಕು ಎಂದು ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್. ಸಲಹೆ ನೀಡಿದರು.

ಏಕಗವಾಕ್ಷಿ ಮೂಲಕ ಎಚ್.ಐ.ವಿ. ಮತ್ತು ಟಿ.ಬಿ. ಸೋಂಕಿತ ಮತ್ತು ಬಾಧಿತರಿಗೆ ವೈದ್ಯಕೀಯ ಮತ್ತು ಸಾಮಾಜಿಕ ಸೌಲಭ್ಯಗಳನ್ನು ಒದಗಿಸುವ ಉದ್ಧೇಶವಿದೆ. ಇದಕ್ಕಾಗಿ ವಿವಿಧ ಇಲಾಖೆಗಳ ನೆರವು ಮತ್ತು ಸಮನ್ವಯದ ಅಗತ್ಯವಿದೆ ಎಂದು ಜಿಲ್ಲಾ ಎಚ್.ಐ.ವಿ/ಏಡ್ಸ್ ನಿಯಂತ್ರಣಾಧಿಕಾರಿಯೂ ಆಗಿರುವ ಜಿಲ್ಲಾ ಕ್ಷಯರೋಗ ನಿಂತ್ರಣಾಧಿಕಾರಿ ಅನಿಲ್ ಕೊರಬು ಹೇಳಿದರು.

ಅಪಾಯದ ಅಂಚಿನಲ್ಲಿರುವ ಲೈಂಗಿಕ ಕಾರ್ಯಕರ್ತೆಯರು, ತೃತೀಯಲಿಂಗಿಗಳು, ಸೋಂಕಿತರು, ಮಕ್ಕಳಿಗೆ ಅಗತ್ಯ ನೆರವು ಸೌಲಭ್ಯ ನೀಡಲು ಶ್ರಮಿಸಲಾಗುತ್ತಿದೆ ಎಂದು ವಿವರಿಸಿದರಲ್ಲದೇ ವಿವಿಧ ಇಲಾಖೆಗಳಿಂದ ಅಗತ್ಯವಿರುವ ನೆರವು ಮತ್ತು ಸಮನ್ವಯದ ಬಗ್ಗೆ ಸಭೆಗೆ ವಿವರಿಸಿದರು.

ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೆÇಲೀಸ್ ಆಯುಕ್ತರಾದ ಚಂದ್ರಶೇಖರ್ ನೀಲಗಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಸವರಾಜ ತುಕ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕಾರ್ಮಿಕ ಅಧಿಕಾರಿ ತರನ್ನುಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 

ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಡಿ.1 ರಿಂದ ಆರಂಭ:
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನವು ಜಿಲ್ಲೆಯಲ್ಲಿ ಡಿಸೆಂಬರ್ 1 ರಿಂದ 31 ರವರಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ(ನ.26) ನಡೆದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಡಿ.1 ರಿಂದ ಮೂರು ಹಂತಗಳಲ್ಲಿ ಕ್ಷಯರೋಗ ಪತ್ತೆ ಆಂದೋಲನ ನಡೆಸಲಾಗುವುದು.
ಡಿ.1 ರಿಂದ 10 ರವರೆಗೆ ಅಥಣಿ, ಹುಕ್ಕೇರಿ, ಗೋಕಾಕ, ಬೈಲಹೊಂಗಲ ತಾಲ್ಲೂಕು ಮತ್ತು ಬೆಳಗಾವಿ ನಗರ ಪ್ರದೇಶದಲ್ಲಿ ಆಂದೋಲನ ನಡೆಯಲಿದೆ.

ಡಿ.11ರಿಂದ 20 ರವರೆಗೆ ಕಾಗವಾಡ, ಚಿಕ್ಕೋಡಿ, ಮೂಡಲಗಿ, ರಾಯಬಾಗ, ರಾಮದುರ್ಗ ತಾಲ್ಲೂಕುಗಳು ಮತ್ತು ಬೆಳಗಾವಿ ಗ್ರಾಮೀಣ ಪ್ರದೇಶದಲ್ಲಿ ನಡೆಯಲಿದೆ.

ಅದೇ ರೀತಿ ಮೂರನೇ ಹಂತದಲ್ಲಿ ಡಿ.21 ರಿಂದ 31 ರವರೆಗೆ ನಿಪ್ಪಾಣಿ, ಕಿತ್ತೂರು, ಖಾನಾಪುರ ಮತ್ತು ಸವದತ್ತಿ ತಾಲ್ಲೂಕಿನಲ್ಲಿ ಸಕ್ರೀಯ ಕ್ಷಯರೋಗ ಪತ್ತೆ ಆಂದೋಲನ ನಡೆಸಲಾಗುವುದು ಎಂದು ವಿವರಿಸಿದರು.

ಕ್ಷಯರೋಗ ಪತ್ತೆ ಆಂದೋಲನದಲ್ಲಿ ಖಾಸಗಿ ಆಸ್ಪತ್ರೆಯವರು ಸರ್ಕಾರದ ಜತೆ ಕೈಜೋಡಿಸುವ ಮೂಲಕ ಆಂದೋಲನದ ಯಶಸ್ಸಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು.

ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿದರೆ ಕ್ಷಯರೋಗದಿಂದ ಗುಣಮುಖರಾಗುವುದು ಸಾಧ್ಯವಿದೆ. ಆದ್ದರಿಂದ ನಿಗದಿತ ಚಿಕಿತ್ಸೆಯನ್ನು ಸಂಪೂರ್ಣವಾಗಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಎರಡು ವಾರಕ್ಕೂ ಮೇಲ್ಪಟ್ಟು ಕೆಮ್ಮು, ಸಂಜೆ ಜ್ವರ, ಕಫದಲ್ಲಿ ರಕ್ತ ಬೀಳುವುದು, ತೂಕ ಕಡಿಮೆಯಾಗುವ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ಕ್ಷಯರೋಗ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಮನವಿ ಮಾಡಿಕೊಂಡರು.

ಜಿಲ್ಲೆಯ 53.55 ಲಕ್ಷ ಜನಸಂಖ್ಯೆಯ ಶೇ.20 ರಷ್ಟು ಅಂದರೆ 11.13 ಲಕ್ಷ ಜನಸಂಖ್ಯೆ ಗುರುತಿಸಿ ಮನೆ ಮನೆಗೆ ಭೇಟಿ ನೀಡಿ ಕ್ಷಯರೋಗ ತಪಾಸಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಂತ್ರಣಾಧಿಕಾರಿ ಅನಿಲ್ ಕೊರಬು ವಿವರಿಸಿದರು.

ಜಿಲ್ಲೆಯಾದ್ಯಂತ 3925 ನುರಿತ ಆರೋಗ್ಯ ಸಹಾಯಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ವಯಂಸೇವಕರ ತಂಡಗಳನ್ನು ರಚಿಸ, ಆ ತಂಡಗಳ ಮೂಲಕ ಮನೆ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದರು.

ಕೋವಿಡ್-19 ಸಂದರ್ಭದಲ್ಲಿ ಸೋಂಕಿತರಾಗಿ ಮತ್ತೆ ಗುಣಮುಖರಾಗಿರುವಂತಹ ಜನರನ್ನು ಕ್ಷಯರೋಗ ಪತ್ತೆಗೆ ಸಂಬಂಧಿಸಿದಂತೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಮಕ್ಕಳ ಮಾರಾಟ ತಡೆಗಟ್ಟುವುದು ಹಾಗೂ ದತ್ತುಮಕ್ಕಳ ಸ್ವೀಕಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೇರಿದಂತೆ ಎಲ್ಲ ಅಧಿಕಾರಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಕ್ಷಯರೋಗಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್., ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೆÇಲೀಸ್ ಆಯುಕ್ತರಾದ ಚಂದ್ರಶೇಖರ್ ನೀಲಗಾರ,

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಸವರಾಜ ತುಕ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕಾರ್ಮಿಕ ಅಧಿಕಾರಿ ತರನ್ನುಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.