ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯ ಕರ್ತಯರು ಗುರುವಾರ ಪ್ರತಿಭಟನೆ ನಡೆಸಿದರು.

0

ಬೆಳಗಾವಿ, ನ. 26- ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ ನೂರಾರು ಅಂಗನವಾಡಿ ಕಾರ್ಯ ಕರ್ತಯರು ಗುರುವಾರ ಪ್ರತಿಭಟನೆ ನಡೆಸಿದರು.

 

ಕೇಂದ್ರ ಮತ್ತು ರಾಜ್ಯ ಸರಕಾರದ ಜನ ವಿರೋಧಿ ನೀತಿಗಳನ್ನು ಹಾಗೂ ಕೆಲಸದ ಅವಧಿ ಹೆಚ್ಚಳ ಮತ್ತು ಕಾರ್ಮಿಕ ಕಾನೂನುಗಳ ಜಾರಿಯಿಂದ ಮಾಲೀಕರಿಗೆ ವಿನಾಯಿತಿ ನೀಡಲು ತರಲು ಉದ್ದೇಶಿಸಿರುವ ಸುಗ್ರೀವಾಜ್ಞೆಯನ್ನು ರದ್ದುಪಡಿಸಬೇಕು ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

 

ಈಗಾಗಲೇ ನಿವೃತ್ತಿಯಾಗಿರುವ ಮತ್ತು ಮುಂದೆ ನಿವೃತ್ತಿಯಾಗಲಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ. 10,000 ಹಾಗೂ ಸಹಾಯಕ ರಿಗೆ ರೂ. 5, ಸಾವಿರ ಪಿಂಚಣಿ ನೀಡಬೇಕು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕೇಂದ್ರ ಸರ ಕಾರ 7ನೇ ವೇತನ ಆಯೋಗ ಅನುಸಾರ ರೂ. 21 ಸಾವಿರ ರು. ಕನಿಷ್ಠ ವೇತನ ನಿಗದಿಪಡಿಸಬೇಕೆಂದು ಆಗ್ರಹಿಸಿದರು.

 

ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳಾದ ಇಎಸ್ ಐ, ಭವಿಷ್ಯದ ನಿಧಿ ಗ್ರ‍್ಯಾಚ್ಯುಟಿ ಸೌಲಭ್ಯಗಳನ್ನು ಒದಗಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ ಕೆಜಿ ಹಾಗೂ ಯುಕೆಜಿ ಪ್ರಾರಂಭಿಸಲು ಸರಕಾರ ಆದೇಶ ಹೊರಡಿಸಬೇಕು. ಬೆಳಗಾವಿ ಗ್ರಾಮೀಣ ಪ್ರದೇಶದ ಅಂಗನ ವಾಡಿ ಕಾರ್ಯಕರ್ತೆ ಮತ್ತು ಸಹಾಯಕರಿಗೆ ಜುಲೈ 2019ರ ಗೌರವ ಧನ ವಿತರಿಸಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

 

ಮುಖಂಡರಾದ ನಾಗೇಶ ಸಾತೇರಿ, ವಾಯ್.ಬಿ.ಶೀಗಿಹಳ್ಳಿ, ಮೀನಾಕ್ಷಿ ಕೊಟಗಿ, ಸುಜಾತಾ ಬೆಳಗಾವಕರ, ಸುರೇಖಾ ವಿಶ್ವನಾಥ ದೆಸಾಯಿ ಸೇರಿ ದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.