ಪ್ರತಿಭಟನೆ ನಡೆಸಿದ್ದು, ಸುವರ್ಣಸೌಧಕ್ಕೆ ಮುತ್ತಿಗೆ

0

ಬೆಳಗಾವಿ : ಮರಾಠಾ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದು, ಸುವರ್ಣಸೌಧಕ್ಕೆ ಮುತ್ತಿಗೆ

ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್ ಸಾ.ರಾ ಗೋವಿಂದ್ ಸೇರಿದಂತೆ ಹಲವರನ್ನುಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ್ದ ಕನ್ನಡಪರ ಸಂಘಟನೆಗಳು ಪೊಲೀಸರ ಕಣ್ತಪ್ಪಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ಈ ವೇಳೆ ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಮುಖ್ಯಮಂತ್ರಿಗಳು ರಾಜ್ಯವನ್ನು ಹಾರಾಜಿಗಿಡುತ್ತಿದ್ದಾರೆ.

ಮುಂದೊಂದು ದಿನ ಸುವರ್ಣಸೌಧವನ್ನೂ ಮರಾಠಾ ಶ್ರೀಮಂತರಿಗೆ ಮಾರಿ ಬಿಡುತ್ತಾರೆ. ಎಂಇಎಸ್ ನವರು ಕರಾಳದಿನ ಆಚರಿಸಲು ಅವಕಾಶ ನೀಡಲಾಗುತ್ತೆ.

ಆದರೆ ಕನ್ನಡಪರ ಸಂಘಟನೆಗಳು ಹೋರಾಟ ನಡೆಸಿದರೆ ಅವರನ್ನು ಬಂಧಿಸಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.