ಸಕಾಲ ಸಪ್ತಾಹ ಆಚರಣೆ

0

 

ಬೆಳಗಾವಿ, ನ 27 : ಸಾರ್ವಜನಿಕರಲ್ಲಿ ಸಕಾಲ ಯೋಜನೆ ಕುರಿತು ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಕಾಲದಡಿ ಸ್ವೀಕರಿಸಿ ಬಾಕಿ ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇ ಮಾಡಲು ಸಕಾಲ ಸಪ್ತಾಹವನ್ನು ಆಚರಿಸಲಾಗುತ್ತಿದೆ.

ನವೆಂಬರ್ 30 ರಿಂದ ಡಿಸೆಂಬರ್ 5 ರವರೆಗೆ ನಗರಾಭಿವೃದ್ಧಿ, ಕಂದಾಯ, ಸಾರಿಗೆ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳಲ್ಲಿ ಹಾಗೂ ಡಿಸೆಂಬರ್ 7 ರಿಂದ ಡಿಸೆಂಬರ್ 11 ರವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಪ್ತಾಹವನ್ನು ಆಚರಿಸಲಾಗುವುದು.

ಸಪ್ತಾಹದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳು:
ಹೊಸದಾಗಿ ಸ್ವೀಕರಿಸಿರುವ ಅರ್ಜಿಗಳನ್ನು ಸಕಾಲದಡಿ ಸ್ವೀಕರಿಸಿ ನಿಗದಿತ ಕಾಲಮಿತಿಯಲ್ಲಿ ವಿಲೇ ಮಾಡುವುದು, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ಸಕಾಲ ಮಿಷನ್ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು, ಸಕಾಲ ತಂಡದಿಂದ ಕಚೇರಿಗಳಿಗೆ ಭೇಟಿ ಹಾಗೂ ತಪಾಸಣೆ, ಸಾರ್ವಜನಿಕರ ಅಭಿಪ್ರಾಯ ಕ್ರೋಢೀಕರಿಸಲು ಹೆಲ್ಪ್

ಡೆಸ್ಕ್ ಸಹಾಯದೊಂದಿಗೆ ಪ್ರಶ್ನಾವಳಿಯನ್ನು ಸಾರ್ವಜನಿಕರಿಂದ ಭರ್ತಿ ಮಾಡಿಸುವುದು ಸೇರಿದಂತೆ ಸಕಾಲದ ಕುರಿತು ಪ್ರಚಾರ ಕಾರ್ಯಕ್ರಮಗಳನ್ನು ಸಪ್ತಾಹದಲ್ಲಿ ಹಮ್ಮಿಕೊಳ್ಳಲಾಗುವುದು.
ಸರ್ಕಾರದ ಸೇವೆಗಳನ್ನು ವಿಳಂಬವಿಲ್ಲದೆ ಕಾಲಮಿತಿಯೊಳಗೆ ನೀಡುವ ಮಹತ್ವಾಕಾಂಕ್ಷೆಯೊಂದಿಗೆ ಕರ್ನಾಟಕ ನಾಗರಿಕ ಸೇವೆಗಳ ಖಾತರಿ ಅಧಿನಿಯಮ 2012 ರಲ್ಲಿ ಜಾರಿಗೆ ತರಲಾಯಿತು.

ಸಕಾಲ ಯೋಜನೆಯಡಿ ಒಟ್ಟು 98 ಇಲಾಖೆ/ಸಂಸ್ಥೆಗಳ 1020 ಕ್ಕೂ ಹೆಚ್ಚಿನ ನಾಗರಿಕ ಕೇಂದ್ರಿತ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ. ಈವರೆಗೆ 22,88,81,652 ಅರ್ಜಿಗಳನ್ನು ಸ್ವೀಕರಿಸಿ 22,82,55,866 ಅರ್ಜಿಗಳನ್ನು ವಿಲೇ ಮಾಡಲಾಗಿದೆ ಎಂದು ಸಕಾಲ ಯೋಜನೆಯ ಹೆಚ್ಚುವರಿ ಮಿಷನ್ ನಿರ್ದೇಶಕರಾದ ಡಾ. ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////