ವಿದ್ಯುತ್ ನಿಲುಗಡೆ

0

 

ಬೆಳಗಾವಿ, ನ 27 : ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಡಿಸೆಂಬರ್ 1 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
33ಕೆ.ವ್ಹಿ. ಲೋಂಡಾ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್,

ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ ಹಾಗೂ ಡೋಕೆಗಾಳಿ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////