ಕುರುಬ ಸಮುದಾಯವನ್ನು ST’ಗೆ ಸೇರಿಸುವಂತೆ ಒತ್ತಾಯಿಸಿ ನಾಳೆ ಬಾಗಲಕೋಟೆಯಲ್ಲಿ ಬೆಳಗಾವಿ ವಿಭಾಗೀಯ ಮಟ್ಟದ ಬೃಹತ್ ಸಮಾವೇಶ ನಡೆಯಲಿದೆ.

0

ಬಾಲಕೋಟೆ : ಕುರುಬ ಸಮುದಾಯವನ್ನು ‘ST’ಗೆ ಸೇರಿಸುವಂತೆ ಒತ್ತಾಯಿಸಿ ನಾಳೆ ಬಾಗಲಕೋಟೆಯಲ್ಲಿ ಬೆಳಗಾವಿ ವಿಭಾಗೀಯ ಮಟ್ಟದ ಬೃಹತ್ ಸಮಾವೇಶ ನಡೆಯಲಿದೆ.

ಬಾಗಲಕೋಟೆ, ಬೆಳಗಾವಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳ ಸುಮಾರು 1 ಲಕ್ಷಕ್ಕೂ ಹೆಚ್ಚು ಜನರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

ಸಮಾವೇಶಕ್ಕೆ 35 ಸಾವಿರ ಆಸನಗಳ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಿಸಲಾಗಿದೆ. ಬಾಗಲಕೋಟೆ ನವನಗರದಲ್ಲಿರುವ ಕಾಳಿದಾಸ್ ಮೈದಾನದಲ್ಲಿ ಸಮಾವೇಶಕ್ಕೆ ಭರದ ಸಿದ್ಧತೆ ನಡೆದಿದೆ. ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ ಎನ್ನಲಾಗಿದೆ.

ಪ್ರಮುಖ ಕುರುಬ ಸಮಾಜದ ರಾಜಕೀಯ ನಾಯಕರು ಸಮಾವೇಶದಲ್ಲಿ ಭಾಗವಹಿಸಲಿದ್ದಾರಂತೆ.