ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ. ಇದರಲ್ಲಿ ಅತ್ಯಂತ ಮುಖ್ಯವಾದ ಪಾತ್ರ ಕಾರ್ಯಕರ್ತರದ್ದಾಗಿರುತ್ತದೆ. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

0

ಶಿರಸಿ: ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ. ಇದರಲ್ಲಿ ಅತ್ಯಂತ ಮುಖ್ಯವಾದ ಪಾತ್ರ ಕಾರ್ಯಕರ್ತರದ್ದಾಗಿರುತ್ತದೆ. ವಿಧಾನಸಭೆ, ಲೋಕಸಭೆ, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಯಾವ ಚುನಾವಣೆಯೇ ಆಗಿರಲಿ ನಾವೆಲ್ಲ ಒಗ್ಗೂಡಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ನಗರದ ತೋಟಗಾರರ ಕಲ್ಯಾಣಮಂಟಪದಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಲು ಹಲವು ಕಾರ್ಯಾ ಯೋಜನೆಗಳನ್ನು ರೂಪಿಸಲಾಗಿದೆ. ಇದರ ಅನುಸಾರವಾಗಿ ನಮ್ಮ ಪಕ್ಷದ ಎಲ್ಲ ಮುಖಂಡರು ಕಾರ್ಯಕರ್ತರು ಪಕ್ಷವನ್ನು ಬಲ ಪಡಿಸಿ ರಾಜ್ಯಾದ್ಯಾಂತ ಕಾಂಗ್ರೆಸ್ ಸಾಧನೆಗಳ ಕುರಿತು ಪ್ರಚಾರ ಮಾಡಬೇಕಿದೆ.

ಮಾಜಿ ಸಿಎಂ ಸಿದ್ದರಾಮಯ್ಯರವರ ಸರಕಾರ ಬಡವರಿಗೆ ನೆರವಾಗಿದ್ದ, ಶೋಷಿತರಿಗೆ ನ್ಯಾಯ ಕೊಡಿಸಿ, ಹಸಿದವರಿಗೆ ಅನ್ನ ನೀಡುವ ಮೂಲಕ ಅನ್ಯಾಯಕ್ಕೂಳಗಾದವರಿಗೆ ನ್ಯಾಯ ಒದಗಿಸುವ ಸರಕಾರವಾಗಿತ್ತು. ಬಡವರಿಗೆ ನೆರವಾಗುವ ಹಲವು ಕಾರ್ಯಕ್ರಮಗಳನ್ನು ಸಿದ್ದರಾಮಯ್ಯ ಸರಕಾರ ಜಾರಿಗೆ ತಂದಿತ್ತು. ಜಾರಿಗೆ ತಂದ ಹಲವು ಕಾರ್ಯಕ್ರಮಗಳು ಯಶಸ್ವಿಯಾದವು ಎಂದು ಹೇಳಿದರು.

ಈ ಹಿಂದೆ ಕಾಂಗ್ರೆಸ್ ಪಕ್ಷ ದೇಶದ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ ಹಲವು ಅಭಿವೃದ್ಧಿಪರ ಯೋಜನೆಗಳನ್ನು ಜನರಿಗೆ ತಲುಪಿಸಿಬೇಕಾಗಿದೆ. ಮನೆ ಮನೆಗೆ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಪ್ರಚಾರಪಡಿಸಿಬೇಕು ಇದರಲ್ಲಿ ಮುಖ್ಯವಾಗಿ ಕಾಂಗ್ರೆಸ್ ಕಾರ್ಯಕರ್ತರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವುಕುಮಾರ್,  ಶಾಸಕ ಆರ್.ವಿ.ದೇಶಪಾಂಡೆ, ಸತೀಶ್ ಸೈಲ್, ವಿ.ಎಸ್.ಆರಾಧ್ಯ, ಆರ್ ನಾಯ್ಕ್, ಚಂದ್ರಣ್ಣ ಬೇಡಾರ್, ಪುಷ್ಟಾ ಅಮರ್ ನಾ ಥ್ ಮತ್ತಿತರ ಕಾಂಗ್ರೆಸ್‍ನ ಹಲವು ಮುಖಂಡರು ಉಪಸ್ಥಿತರಿದ್ದರು.