ಕಳಸಾ ಬಂಡೂರಿ ಯೋಜನೆಯ ಅನುಷ್ಠಾನಕ್ಕೆ ನಿರಂತರ ಪ್ರಯತ್ನ ನಡೆಸಿದ್ದು ಉನ್ನತ ಮಟ್ಟದ ಸಭೆ

0

ಬೆಳಗಾವಿ- ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕಳಸಾ ಬಂಡೂರಿ ಯೋಜನೆಯ ಅನುಷ್ಠಾನಕ್ಕೆ ನಿರಂತರ ಪ್ರಯತ್ನ ನಡೆಸಿದ್ದು

ಆದಷ್ಟು ಬೇಗನೆ ಈ ಯೋಜನೆಯ ಪೂರ್ಣಗೊಳಿಸುವ ಸಂಕಲ್ಪ ಮಾಡಿದ್ದು

ನಾಳೆ ಸೋಮವಾರ ಈ ಯೋಜನೆಯ ಕುರಿತು ಮಹತ್ವದ ಸಭೆ ನಡೆಸಲಿದ್ದಾರೆ.

ಕಳಸಾ ಬಂಡೂರ ಮತ್ತು ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಮತ್ತು ಇತರೆ ನೀರಾವರಿ ಯೋಜನೆಗಳಿಗೆ ಅರಣ್ಯ ಇಲಾಖೆಯ ತೀರುವಳಿ ಪಡೆಯುವ ಕುರಿತು ಉನ್ನತ ಮಟ್ಟದ ಸಭೆ

ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌* ಅವರ ಅಧ್ಯಕ್ಷತೆಯಲ್ಲಿ ನಾಳೆ ಸೋಮವಾರ ನಡೆಯಲಿದೆ.

ಬೆಳಗಾವಿ,ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ*ಮಧ್ಯಾಹ್ನ 12 ಗಂಟೆಗೆ ಸಭೆ ಆರಂಭವಾಗಲಿದ್ದು,ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.