ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ.

0

ಬೆಳಗಾವಿ, ಡಿ. 1- ‘ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದ ಅವಧಿ ಪೂರ್ಣಗೊಳಿಸುತ್ತಾರೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಅನುಭವಿ ಹಾಗೂ ಸಮರ್ಥ ನಾಯಕರಾಗಿದ್ದಾರೆ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದರು.

‘ಶೀಘ್ರದಲ್ಲೇ ನಿಮಗೆ ಇನ್ನೂ ಉನ್ನತ ಹುದ್ದೆ ಸಿಗಲಿದೆಯೇ?’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಸಿಎಂ ಬದಲಾವಣೆ ಬಗ್ಗೆ ಮಾತು ಕ್ಲಿ ಬರುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಕೇವಲ ಭ್ರಮೆ ಅಷ್ಟೇ ಎಂದು ಹೇಳಿದರು.