ಸವದತ್ತಿ ಯಲ್ಲಮ್ಮ ದರ್ಶನ ಡಿ.31 ರವರೆಗೆ ನಿರ್ಬಂಧ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

0

 

ಬೆಳಗಾವಿ, ಡಿ.1 : ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೊವಿಡ್-19 ಹರಡದಂತೆ ತಡೆಯುವ ಕುರಿತು ಮುಂಜಾಗ್ರತಾ ಕ್ರಮವಾಗಿ ಸವದತ್ತಿ ತಾಲೂಕಿನ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನ ಹಾಗೂ ಶ್ರೀ ಜೋಗಳಭಾವಿ ಸತ್ತೆವ್ವಾ ದೇವಿಯ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಡಿಸೆಂಬರ್ 31 ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.


ಈ ಕುರಿತು ಪ್ರಕಟಣೆ ನೀಡಿರುವ ಅವರು ದೇವಸ್ಥಾನಗಳ ಆಡಳಿತ ಮಂಡಳಿಯವರು ಈ ದೇವಸ್ಥಾನಗಳಲ್ಲಿ ದಿನನಿತ್ಯದ ಧಾರ್ಮಿಕ ವಿಧಿವಿಧಾನಗಳನ್ನು ಹಾಗೂ ಎಲ್ಲ ಮುಂಜಾಗ್ರತಾ ಕ್ರಮ ವಹಿಸಿ ನಡೆಸುವ ಷರತ್ತಿಗೊಳಪಟ್ಟು ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಅಡಿ ಹಾಗೂ ಭಾರತೀಯರ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದ್ದಾರೆ.

ಆದೇಶವನ್ನು ಜಾರಿಗೊಳಿಸಲು ದೇವಸ್ಥಾನಗಳ ಆಡಳಿತ ಮಂಡಳಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಬೆಳಗಾವಿ, ಉಪವಿಭಾಗಾಧಿಕಾರಿ ಬೈಲಹೊಂಗಲ, ತಹಿಶೀಲ್ದಾರ ಸವದತ್ತಿ ಮತ್ತು ಸಂಬಂಧಪಟ್ಟ ಎಲ್ಲ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.