ಕನ್ನಡದ ಹಿತಾಸಕ್ತಿ ಉದ್ದೇಶದಿಂದ ಕರ್ನಾಟಕ ಬಂದ್: ವಾಟಾಳ್, ಗೋವಿಂದ್ ಸಮರ್ಥನೆ,ಬೆಂಬಲಕ್ಕೆ ಮನವಿ

0

ಮರಾಠ ಅಭಿವೃದ್ಧಿ ನಿಗಮವನ್ನು ರದ್ದುಪಡಿಸಲು ಆಗ್ರಹಿಸಿ ಡಿ.5ರಂದು ಹಮ್ಮಿಕೊಂಡಿರುವ ರಾಜ್ಯ ಬಂದ್‍ಗೆ ಜನತೆ ಬೆಂಬಲ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಬೆಂಗಳೂರಿನಲ್ಲಿ ಮನವಿ ಮಾಡಿದರು.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರಚಾರಾಂದೋಲನಕ್ಕೆ ಗುರುವಾರ ಚಾಲನೆ ನೀಡಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿ, ಡಿಸೆಂಬರ್ 5ರಂದು ನಡೆಯಲಿರುವ ಕರ್ನಾಟಕ ಬಂದ್

ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿದೆ. ಕನ್ನಡಿಗರನ್ನು, ಕನ್ನಡಿಗರ ಹಿತಾಸಕ್ತಿಗೆ ಧಕ್ಕೆ ತರುವ ತೀರ್ಮಾನ ಕೈಗೊಳ್ಳುವ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಳ್ಳಬೇಕಿದೆ.

ಅದಕ್ಕಾಗಿ ಬಂದ್ ಬೆಂಬಲಿಸಿರಿ ಎಂದು ಮನವಿ ಮಾಡಿದರು. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ರಾಜ್ಯಾದ್ಯಂತ ಬಂದ್ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ 1600ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು, ರೈತ, ಕಾರ್ಮಿಕ ಸಂಘಟನೆಗಳು ಬೆಂಬಲ ಘೋಷಿಸಿವೆ ಎಂದು ತಿಳಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣಗೌಡ, ಪ್ರವೀಣಕುಮಾರ್ ಶೆಟ್ಟಿ ಬಂದ್‍ಗೆ ಬೆಂಬಲ ನೀಡಿದ್ದಾರೆ. ಗಡಿಗಳನ್ನು ಬಂದ್ ಮಾಡಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಹೇಳಿದರು.

ಅದಕ್ಕಾಗಿ ಬಂದ್ ಬೆಂಬಲಿಸಿರಿ ಎಂದು ಮನವಿ ಮಾಡಿದರು. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ರಾಜ್ಯಾದ್ಯಂತ ಬಂದ್ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ 1600ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು, ರೈತ, ಕಾರ್ಮಿಕ ಸಂಘಟನೆಗಳು ಬೆಂಬಲ ಘೋಷಿಸಿವೆ ಎಂದು ತಿಳಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣಗೌಡ, ಪ್ರವೀಣಕುಮಾರ್ ಶೆಟ್ಟಿ ಬಂದ್‍ಗೆ ಬೆಂಬಲ ನೀಡಿದ್ದಾರೆ.

ಗಡಿಗಳನ್ನು ಬಂದ್ ಮಾಡಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಹೇಳಿದರು.

ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿ, ನಾವು ಶಾಂತಿಯುತವಾಗಿ ಬಂದ್ ಮಾಡುತ್ತೇವೆ. ಬಂದ್ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದರು.

ರಾಜಕೀಯ ಕಾರಣಕ್ಕಾಗಿ ರಚನೆಯಾಗಿರುವ ಮರಾಠ ಅಭಿವೃದ್ಧಿ ನಿಗಮವನ್ನು ಸರ್ಕಾರ ಹಿಂಪಡೆಯದಿದ್ದರೆ 5ರ ನಂತರ ಜೈಲ್ ಭರೋ ಚಳವಳಿ ಹಮ್ಮಿಕೊಳ್ಳುತ್ತೇವೆ ಎಂದರು.