ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ  ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ

0

ಬೆಳಗಾವಿ: ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ  ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಖಾಸಗಿ  ಹೋಟೆಲ್ ನಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಗ್ರಾಮ ಪಂಚಾಯಿತಿ  ಚುನಾವಣೆ ದೃಷ್ಠಿಯಿಂದ  ಗ್ರಾಮಗಳನ್ನು ಅಭಿವೃದಿಗೊಳಿಸುವ ನಿಟ್ಟಿನಲ್ಲಿ  ಗ್ರಾಮ ಸ್ವರಾಜ್ಯ  ಪರಿಕಲ್ಪನೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ.  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ  ಸ್ಪರ್ಧಿಸಲು  ಅಪೇಕ್ಷಿಸುವ ಕಾರ್ಯಕರ್ತರಿಗೆ ಬೆಂಬಲ ನೀಡಲಾಗುವುದು ಎಂದು ಹೇಳಿದರು.

ಪಕ್ಷ ಸಂಘಟನೆ ದೃಷ್ಠಿಯಿಂದ ತಿಂಗಳಿಗೊಮ್ಮೆ ಕಾರ್ಯ ಕಾರಿಣಿ, ಪದಾಧಿಕಾರಿಗಳ ಸಭೆ, ವಿಶೇಷ ಕಾರ್ಯಕ್ರಮಗಳ  ಹಮ್ಮಿಕೊಳ್ಳಲಾಗುತ್ತಿದೆ. ಇದರಿಂದ ಬೂತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.