ಗ್ರಾ. ಪಂ ಮೊದಲ ಹಂತದ ಚುನಾವಣೆಗೆ ಅಧಿಸೂಚನೆ

0

ಬೆಳಗಾವಿ, ಡಿ.7: ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ರಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಮೊದಲನೇ ಹಂತಕ್ಕೆ ಡಿ.11 ಕೊನೆಯ ದಿನವಾಗಿದ್ದು ನಾಮಪತ್ರಗಳ ಪರಿಶೀಲನೆ ಡಿ.12 ಆಗಿರುತ್ತದೆ. ಉಮೇದುವಾರಿಕೆ ಹಿಂಪಡೆಯಲು ಡಿ.14 ಆಗಿದ್ದು ಚುನಾವಣೆಗೆ ಡಿ.22 ಮತದಾನ ನಡೆಯಲಿದ್ದು, ಡಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದೆ.
ಆಯಾ ತಾಲ್ಲೂಕುಗಳಲ್ಲಿ ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.
1410 ಕ್ಷೇತ್ರಗಳಿಗೆ ಹಾಗೂ ವಿವಿಧ ವರ್ಗವಾರು 4259 ಸದಸ್ಯ ಸ್ಥಾನಗಳಿಗೆ ಮೊದಲ ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು.
ಸಂಬಂಧಪಟ್ಟ ಗ್ರಾಮ ಪಂಚಾಯತಿಗಳಲ್ಲಿ ನಾಮಪತ್ರಗಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಲಾಗಿರುತ್ತದೆ. ಎಂದು ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ತಿಳಿಸಿದ್ದಾರೆ.