ಕೃಷಿ ಕಾಯ್ದೆ ವಿರೋಧಿಸಿ  ರೈತರು ನಾಳೆ ನಡೆಸುತ್ತಿರುವ ಭಾರತ್ ಬಂದ್ ಗೆ  ಜೆಡಿಎಸ್  ಪಕ್ಷದ   ಬೆಂಬಲವಿದೆ ಅಂತಾ  ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ ಹೇಳಿದ್ದಾರೆ.

0

ಬೆಂಗಳೂರು: ಕೇಂದ್ರ ಸರ್ಕಾರ ಜನ ವಿರೋಧ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಕೃಷಿ ಕಾಯ್ದೆ ವಿರೋಧಿಸಿ  ರೈತರು ನಾಳೆ ನಡೆಸುತ್ತಿರುವ ಭಾರತ್ ಬಂದ್ ಗೆ  ಜೆಡಿಎಸ್  ಪಕ್ಷದ   ಬೆಂಬಲವಿದೆ ಅಂತಾ  ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ ಹೇಳಿದ್ದಾರೆ.

 

ಈಗ ಉತ್ತರ ಭಾರತದ ರೈತರು ಹೋರಾಟ ಮಾಡ್ತಿದ್ದಾರೆ. ನಮ್ಮ ದಕ್ಷಿಣ ಭಾರತದ ರೈತರು ಹೋರಾಟ ಮಾಡಿ ಸಾಕಾಗಿದೆ. ರೈತರ ವಿರೋಧ ಮಾಡಿ ಯಾವ ರಾಜಕಾರಣಿಗಳೂ ಉಳಿದಿಲ್ಲ. ಬಂದ್ ಇರೋದ್ರಿಂದ ಸದನ ಬಂದ್ ಮಾಡಬೇಕು. ಪ್ರತಿಪಕ್ಷದವರು ನಾಳೆ ಕಲಾಪ ಬಹಿಷ್ಕರಿಸಬೇಕು. ಇದರ ಬಗ್ಗೆ ನಾವು ಗೌಡರ ಜೊತೆ ಚರ್ಚೆ ಮಾಡ್ತೇವೆ ಎಂದರು.

 

ವಿಧಾನ ಪರಿಷತ್ ಸಭಾಪತಿ ವಿರುದ್ಧ ಬಿಜೆಪಿ ಬಿಜೆಪಿ   ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ   ಜೆಡಿಎಸ್ ಬೆಂಬಲ ಕೊಡುವ ಸಾಧ್ಯತೆ ಕಡಿಮೆ ಇದೆ.  ನಾವು ಬಿಜೆಪಿಗೆ ಸಪೋರ್ಟ್ ಮಾಡುವ ಬಗ್ಗೆ ಚರ್ಚಿಸಿಲ್ಲ ಎಂದರು.

 

ಇದೇ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷರ ಮಾತಿಗೆ ದನಿಗೂಡಿಸಿದ ಜೆಡಿಎಸ್ ಶಾಸಕ ಶಿವಲಿಂಗೇಗೌಡ, ಬಿಜೆಪಿಯ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಬೆಂಬಲ ಕೊಡುವ ಸಾಧ್ಯತೆ ಕಡಿಮೆ. ಈ ಬಗ್ಗೆ ದೇವೇಗೌಡರು ಹಾಗೂ ಪಕ್ಷದ ನಾಯಕರ ಜೊತೆ ಮಾತಾಡ್ತೀವಿ ಎಂದು ತಿಳಿಸಿದರು.

ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ,  ಬಿಜೆಪಿಗೆ ಬೆಂಬಲಿಸುವ ಸಾಧ್ಯತೆ ಕಡಿಮೆ