ತಿದ್ದುಪಡೆ ವಾಪಸ್ ಪಡೆಯುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆ ನಗರದಲ್ಲಿ ರೈತ ಹಾಗೂ ಕನ್ನಡಪರ ಸಂಘಟನೆಗಳು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು

0
ಬೆಳಗಾವಿ : ಕೃಷಿ ಮಸೂದೆ ಕಾಯ್ದೆ  ತಿದ್ದುಪಡೆ ವಾಪಸ್ ಪಡೆಯುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆ ನಗರದಲ್ಲಿ ರೈತ ಹಾಗೂ ಕನ್ನಡಪರ ಸಂಘಟನೆಗಳು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.
ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಟೈರ್ ಗೆ ಬೆಂಕಿ ಹಚ್ಚಿ, ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಬೆಳ್ಳಂಬೆಳಿಗ್ಗೆ ರೈತರು ಬಸ್ ನಿಲ್ದಾಣಕ್ಕೆ ಆಗಮಿಸಿ, ಬಸ್ ಸಂಚಾರ ತಡೆ ನಡೆಸಿದರು. ಟೈರ್ ಗೆ ಬೆಂಕಿ ಹಚ್ಚಿ ಧರಣಿ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಟೈರ್ ವಶಕ್ಕೆ ಪಡೆಯಲು ಯತ್ನಿಸಿದರು. ಪೊಲೀಸರು ಹಾಗೂ ರೈತ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ರೈತರು ರಸ್ತೆಯಲ್ಲಿ ಉರುಳು ಸೇವೆ ನಡೆಸಿ, ವಿನೂತನ ಪ್ರತಿಭಟನೆ ನಡೆಸಿದರು‌.
ಕೃಷಿ ಮಸೂದೆ ತಿದ್ದುಪಡೆಗಳು ರೈತರಿಗೆ ಮಾರಕವಾಗಿವೆ. ಈಗಾಗಲೇ ಕಳೆದ 9 ದಿನಗಳಿಂದಲೂ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ರೈತರ ಬೇಡಿಕೆಗೆ ಸ್ಪಂಧಿಸುತ್ತಿಲ್ಲ. ಸರ್ಕಾರ ಕೂಡಲೇ ಕೃಷಿ ಮಸೂದೆ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ  ಸಿದಗೌಡ ಮೋದಗಿ,‌ ರೈತ ಮುಖಂಡರಾದ ಚೂನಪ್ಪಾ ಪೂಜಾರಿ, ಜಯಶ್ರೀ ಗುರನ್ನವರ ಇತರ ರೈತರು  ಇದ್ದರು.
ಇನ್ನೂ ಬೆಳಗಾವಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ಬಿಸಿ ತಟ್ಟಿದೆ. ಅಥಣಿ ತಾಲ್ಲೂಕಿನಲ್ಲಿಯೂ ರೈತರು ವಿನೂತನ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ತಡೆದು, ಬಾಯಿ ಬಡಿದುಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.