ಬೆಳಗಾವಿ, ಡಿ, 8- ಆಟ ಆಡುತ್ತಿದ್ದ ಸಂದರ್ಭದಲ್ಲಿ ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕರು ಸಾವಿಗೀಡಾದ ಘಟನೆ ತಾಲ್ಲೂಕಿನ ಬೆಕ್ಕಿನಕೇರಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ನಡೆದಿದೆ.
ನೆರೆಯ ಮಹಾರಾಷ್ಟ್ರದ ಚಂದಗದ ಗ್ರಾಮದ ಲೋಕೇಶ ಪಾಟೀಲ (10) ಹಾಗೂ ಬೆಕ್ಕಿನಕೇರಿ ಗ್ರಾಮದ ನಿಖಿಲ್ ಬೊಂದ್ರೆ (7) ಮೃತ ದುರ್ದೈವಿ ಬಾಲಕರು. ಲೋಕೇಶ ಕೋವಿಡ್–19 ಕಾರಣದಿಂದ ಶಾಲೆಗಳಿಗೆ ರಜೆ ಇದ್ದ ಕಾರಣ ಕೆಲವು ದಿನಗಳ ಹಿಂದೆ ಬೆಕ್ಕಿನಕೇರಿಯಲ್ಲಿನ ಮಾವನ ಮನೆಗೆ ಬಂದಿದ್ದನು.
ಮೂವರು ಬಾಲಕರು ಆಟವಾಡಲು ಹೋಗಿದ್ದರು. ಬಾವಿಯಲ್ಲಿ ಏಡಿಗಳನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಯತಪ್ಪಿ ಬಿದ್ದಿದ್ದಾರೆ. ಈಜು ಬಾರದ ಇಬ್ಬರು ನೀರಿನಲ್ಲಿ ಮುಳುಗಿದ್ದಾರೆ. ಒಬ್ಬ ಪಾರಾಗಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು. ಸೇರಿದ್ದ ಜನರು ಸಾವು ಕಂಡು ಮಮ್ಮಲ ಮರುಗಿದರು ಎಂದು ಹೇಳ ಲಾಗುತ್ತಿದೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Recover your password.
A password will be e-mailed to you.