ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸಿಬಿಐ ವಿಶೇಷ ಕೋರ್ಟ್ ತೀರ್ಪನ್ನು ಡಿಸೆಂಬರ್ 14ಕ್ಕೆ

0

ಬೆಂಗಳೂರು : ಜಿಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸಿಬಿಐ ವಿಶೇಷ ಕೋರ್ಟ್ ತೀರ್ಪನ್ನು ಡಿಸೆಂಬರ್ 14ಕ್ಕೆ ಕಾಯ್ದಿರಿಸಿದೆ.

ಇಂದು ಸಿಬಿಐ ವಿಶೇಷ ಕೋರ್ಟ್ ನಲ್ಲಿ ಜಿಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟು, ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು.

ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಪೀಠಕ್ಕೆ ಸಿಬಿಐ ಪರ ವಕೀಲರು ಜಾಮೀನು ನೀಡದಂತೆ ಮನವಿ ಮಾಡಿದರು. ಈ ಎಲ್ಲಾ ಮನವಿಯನ್ನು ವಾದ-ಪ್ರತಿ ವಾದ ಆಲಿಸಿದಂತ ನ್ಯಾಯಾಲಯ, ತೀರ್ಪನ್ನು ಡಿಸೆಂಬರ್ 14ಕ್ಕೆ ಕಾಯ್ದಿರಿಸಿ, ಮುಂದೂಡಿತು