ತಂಬಾಕು ಹಾಗೂ ಅದರ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲವು ರೀತಿಯ ದುಷ್ಪರಿ ಣಾಮಗಳು ಉಂಟಾ ಗುತ್ತವೆ. ಹೀಗಾಗಿ, ಅವುಗಳನ್ನು ತ್ಯಜಿಸಬೇಕು
ಬೆಳಗಾವಿ, ಡಿ. ೯- ತಂಬಾಕು ಹಾಗೂ ಅದರ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲವು ರೀತಿಯ ದುಷ್ಪರಿ ಣಾಮಗಳು ಉಂಟಾ ಗುತ್ತವೆ. ಹೀಗಾಗಿ, ಅವುಗಳನ್ನು ತ್ಯಜಿಸಬೇಕು ಎಂದು ಸಿಪಿಐ ಕುಬೇರ ರಾಯಮನಿ ಸಲಹೆ ನೀಡಿದರು.
ನಗರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಪೊಲೀಸ್ ಅದಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಡಿಎಚ್ಒ ಡಾ.ಎಸ್.ವಿ. ಮುನ್ಯಾಳ ಮಾತನಾಡಿ, ‘ಸಿಗರೇಟು ಸೇವನೆಯಿಂದ ನಮ್ಮ ಆರೋಗ್ಯ ಹಾಳಾಗುವುದಲ್ಲದೆ ಇನ್ನೊಬ್ಬರ ಆರೋಗ್ಯವೂ ಹಾಳಾಗುತ್ತದೆ. ಇದರಿಂದಾಗಿ ನಾವೆಲ್ಲರೂ ಪರೋಕ್ಷವಾಗಿ ತಂಬಾಕು ಸೇವನೆಗೆ ಒಳಗಾಗು ತ್ತಿದ್ದೇವೆ’ ಎಂದು ಕಳವಳ ವ್ಯಕ್ತಪಡಿಸಿದರು.
ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲೆ ಡಾ. ಸರೋಜಾ ತಿಗಡಿ, ತಂಬಾಕಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಯುವ ಜನರಲ್ಲಿ ಜಾಗೃತಿ ಮೂಡಿಸಬೇಕು. ದುಶ್ಚಟಕ್ಕೆ ಒಳಗಾಗದಂತೆ ನೋಡಿಕೊಳ್ಳಬೇಕು. ಗರ್ಭಿಣಿಯರು ತಂಬಾಕು ಸೇವಿಸುವುದರಿಂದ ನಿರ್ಜೀವ ಜನನ, ಅವಧಿ ಪೂರ್ವ ಜನನ ಹಾಗೂ ಕಡಿಮೆ ತೂಕವಿರುವ ಮಕ್ಕಳು ಜನಿಸುತ್ತಾರೆ. ಅಂಗವಿಕಲ ಮಕ್ಕಳ ಜನನ ಪ್ರಮಾಣ ಹೆಚ್ಚಾಗುತ್ತದೆ. ಹೀಗಾಗಿ, ಮಹಿಳೆ ಯರು ಈ ದುಶ್ಚಟದಿಂದ ದೂರವಿರಬೇಕು’ ಎಂದು ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಡಾ. ಶ್ವೇತಾ ಪಾಟೀಲ, ‘ಕೋಟ್ಪಾ ಕಾಯ್ದೆ-2003ರ ಸೆಕ್ಷನ್-4ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಈ ಕಾನೂನು ಉಲ್ಲಂಘಿಸಿದ ವ್ಯಕ್ತಿಗೆ ರೂ 200 ದಂಡ ವಿಧಿಸಲಾಗುವುದು. ಸೆಕ್ಷನ್-5 ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ನಿಷೇಧಿಸಲಾಗಿದೆ. ಸೆಕ್ಷನ್-6ರಲ್ಲಿ ತಂಬಾಕು ಉತ್ಪನ್ನಗಳನ್ನು ಅಪ್ರಾಪ್ತ ವಯ ಸ್ಕರಿಗೆ ಕೊಡುವಂತಿಲ್ಲ. ಸೆಕ್ಷನ್-6 (ಬಿ)ಯಂತೆ ಶಿಕ್ಷಣ ಸಂಸ್ಥೆಗಳ 100 ಮೀಟರ್ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಮತ್ತು ಸೆಕ್ಷನ್-7 ಪ್ರಕಾರ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರುವುದು ಕೂಡ ಶಿಕ್ಷಾರ್ಹ ಅಪರಾಧ’ ಎಂದು ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಮತ್ತು ತಂಬಾಕು ನಿಯಂತ್ರಣಾಧಿಕಾರಿ ಡಾ.ಬಿ.ಎನ್. ತುಕ್ಕಾರ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಕವಿತಾ ರಾಜನ್ನವರ ನಿರೂಪಿಸಿದರು.