ಬೆಳಗಾವಿ ಡಿಸಿ ಕಚೇರಿ ಮೇಲಿಂದ ಜಿಗಿದು ಆತ್ಮಹತ್ಯೆಗೆ ವ್ಯಕ್ತಿ ಯತ್ನ…

0

ಬೆಳಗಾವಿ, ಡಿ. 11- ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಹೈ ಡ್ರಾಮಾ ನಡೆದಿದೆ…. ಅದೇನು ನೀವೇ ಓದಿ … ಪೊಲೀಸರ ಸಮಯ ಪ್ರಜ್ಞೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದೆ…

ಘಟನೆ ವಿವರ ; ಕೇರಳ ಮೂಲದ ವಾಮದೇವನ್ ಆತ್ಮಹತ್ಯೆಗೆ ಯತ್ನಿಸಿ ಗೊಂದಲ ಸೃಷ್ಟಿಸಿದ ವ್ಯಕ್ತಿ ಆಗಿದ್ದು, ಈತನನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ..

‘ರಾಯಬಾಗದ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಆರೂವರೆ ತಿಂಗಳಿನಿಂದ ನನಗೆ ಸಂಬಳ ಬಂದಿಲ್ಲ. ವರ್ಗಾವಣೆಯನ್ನೂ ಮಾಡಲಾಗಿದೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸ್ ಠಾಣೆಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಇದರಿಂದ ಜೀವನ ನಿರ್ವಹಣೆಗೆ ಬಹಳ ತೊಂದರೆಯಾಗಿದೆ. ಹೀಗಾಗಿ, ಆತ್ಮಹತ್ಯೆಗೆ ಮುಂದಾದೆ’ ಎಂದು ಮಾಧ್ಯಮ ಎದುರು ವ್ಯಕ್ತಿ ಹೇಳಿಕೊಂಡಿದ್ದಾನೆ…

ಒಟ್ಟಾರೆ ಜಿಲ್ಲಾಧಿಕಾರಿ ಕಚೇರಿ ಡ್ಯೂಟಿಯಲ್ಲಿದ್ದ ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ ಎಂದೇ ಹೇಳಬಹುದು..