ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ

0

ಬೆಳಗಾವಿ, ಡಿ. 11- ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ನನ್ನ ಹೆಸರೇ ಅಂತಿಮ ವಾಗಿದೆ ಎಂದು ಸುದ್ದಿ ಹರಡಿದೆ. ಇದನ್ನು ಕೆಲವರು ಉದ್ದೇಶಪೂರ್ವಕವಾಗಿ ಮಾಡಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅಭ್ಯರ್ಥಿ ಬಗ್ಗೆ ಬೆಂಗಳೂರಿನಲ್ಲಿ ಕುಳಿತು ಹೇಳಲು ಸಾಧ್ಯವಿಲ್ಲ. ಅದಕ್ಕಾಗಿ ಸಮಿತಿ ರಚಿಸಲಾಗಿದೆ. ಇನ್ನೊಮ್ಮೆ ಬೆಳಗಾವಿಯಲ್ಲಿ ಸಭೆ ನಡೆಯಲಿದೆ. ಅಲ್ಲಿ ಆಯ್ಕೆಯಾಗುವ ಅಭ್ಯರ್ಥಿಯೇ ಅಂತಿಮ ಎಂದು ಸ್ಪಷ್ಟಪಡಿಸಿದರು.

ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜನರಿಗೆ ಸಮಸ್ಯೆ ಆಗುತ್ತದೆ.. ‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹರಾಜು ಮೂಲಕ ಆಯ್ಕೆ ಸರಿಯಲ್ಲ‌. ಚುನಾವಣೆ ಅಥವಾ ಅವಿರೋಧ ಆಯ್ಕೆ ಸೂಕ್ತ’ ಎಂದು ಪ್ರತಿಕ್ರಿಯಿಸಿದರು.