ಸಾರಿಗೆ ನೌಕರರು ಮುಷ್ಕರ ಬಿಟ್ಟು ಮಾತುಕತೆಗೆ ಬರುವಂತೆ ಸರ್ಕಾರ ಆಹ್ವಾನ ನೀಡಿದರೂ ಬಗ್ಗದ ಸಾರಿಗೆ ನೌಕರರು ನಾಳೆಯಿಂದ ಹೋರಾಟ ಇನ್ನಷ್ಟು ತೀವ್ರಗೊಳಿಸಲು ಮುಂದಾಗಿದ್ದಾರೆ. ಸುದ್ದಿಗೋಷ್ಠಿ

0

ಬೆಂಗಳೂರು : ಸಾರಿಗೆ ನೌಕರರು ಮುಷ್ಕರ ಬಿಟ್ಟು ಮಾತುಕತೆಗೆ ಬರುವಂತೆ ಸರ್ಕಾರ ಆಹ್ವಾನ ನೀಡಿದರೂ ಬಗ್ಗದ ಸಾರಿಗೆ

ನೌಕರರು ನಾಳೆಯಿಂದ ಹೋರಾಟ ಇನ್ನಷ್ಟು ತೀವ್ರಗೊಳಿಸಲು ಮುಂದಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ನೌಕರರ ಹೋರಾಟಗಾರರ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಸರ್ಕಾರ ಮುಷ್ಕರಕ್ಕೆ ಮಣಿಯದ ಹಿನ್ನೆಲೆಯಲ್ಲಿ

ನಾಳೆಯಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದರು.

ನಾಳೆ ಬೆಳಿಗ್ಗೆಯಿಂದ ಎಲ್ಲಾ ಡಿಪೋಗಳಲ್ಲಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ನಮ್ಮ ಬೇಡಿಕೆ ಈಡೇರಿಕೆಯಾಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.