ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

0
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಬೆಳಗಾವಿ, ಡಿ.13: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಕಾರ್ಯವನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಭಾನುವಾರ(ಡಿ.13) ಖುದ್ದಾಗಿ ಪರಿಶೀಲಿಸಿದರು.
ನಗರದ ವಿಶ್ವೇರಯ್ಯ ನಗರ, ಆಜಂ‌ ನಗರ ಮತ್ತು ರಾಮ ನಗರ ಸೇರಿದಂತೆ ವಿವಿಧ ಕಡೆಯ ಸರ್ಕಾರಿ ಶಾಲೆಗಳ ಮತಗಟ್ಟೆ ಕೇಂದ್ರಗಳಲ್ಲಿ ನಡೆದಿರುವ ಪರಿಷ್ಕರಣೆ ಕಾರ್ಯವನ್ನು ವೀಕ್ಷಿಸಿದರು.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಕಾರ್ಯಕ್ಕೆ ನಿಯೋಜಿತರಾಗಿರುವ ಸಿಬ್ಬಂದಿಯಿಂದ ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾಧಿಕಾರಿಗಳು, ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಬರದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್. ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.