ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ: ಸತೀಶ ಜಾರಕಿಹೊಳಿ

0

ರಾಯಬಾಗ:  ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ ಕಾಯ್ದೆಗಳ ಜಾರಿಗೆ ತರುವ ಮೂಲಕ  ಜನ ಸಾಮಾನ್ಯರಿಗೆ ತೊಂದರೆಗೀಡು ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ವಾಗ್ದಾಳಿ ನಡೆಸಿದರು.

ತಾಲಕಿನ ಕುಡಚಿಯಲ್ಲಿ  ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ರಾಜ್ಯ ಸರ್ಕಾರ ಇತ್ತೀಚಿಗೆ ಗೋ ಹತ್ಯೆ ನಿಷೇಧ ಜಾರಿಗೆ ತಂದಿದೆ. ಇದರಿಂದ ರೈತಾಪಿ ವರ್ಗಕ್ಕೆ ತುಂಬ ನಷ್ಟವಾಗಲಿದೆ ಅಂತಾ ಹೇಳಿದರು.

ಕೃಷಿ ವಲಯಕ್ಕೆ ಮಾರಕವಾಗಿರುವ ಕಾಯ್ದೆಗಳನ್ನು ಹಿಂಪಡೆಯುಂತೆ ಕಳೆದ 17 ದಿನಗಳಿಂದ ರೈತರು ಮುಷ್ಕರ ನಡೆಸುತ್ತಿದ್ದಾರೆ. ಆದ್ರೆ  ಕೇಂದ್ರ ಸರ್ಕಾರ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ.

ಪ್ರಧಾನಿ  ಮೋದಿ  ರೈತರ ಬಗ್ಗೆ ಕಾಳಜಿಯೇ ಇಲ್ಲ. ಇಂತಹ ರೈತ  ವಿರೋಧಿ ಸರ್ಕಾರಕ್ಕೆ  ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲವು ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ರಾಯಬಾಗ ಕಾಂಗ್ರೆಸ್ ಮುಖಂಡ ಮಹಾವೀರ ಮೋಹಿತೆ, ಮಾಜಿ ಶಾಸಕ ಶ್ಯಾಮ ಘಾಟಗೆ, ಮಾಜಿ ಸಚಿವ ವೀರಕುಮಾರ್ ಪಾಟೀಲ, ಕುಡಚಿ ರಾಯಬಾಗ ಉಸ್ತುವಾರಿ ಎಲ್.ಹನುಮಂತ, ಸುನೀಲ ಹನಮಣ್ಣವರ, ಅರ್ಜುನ್ ನಾಯ್ಕವಾಡಿ, ಕಾಂಗ್ರೆಸ್ ಮಹಿಳಾ ಜಿಲ್ಲಾಧ್ಯಕ್ಷ ತೇಜಸ್ವಿನಿ‌ ನಾಯ್ಕವಾಡಿ, ಬಾನೆ ಸರಕಾರ ಸೇರಿದಂತೆ ಇತರರು ಇದ್ದರು.